ಬಿಜೆಪಿಯ ಸೋಲಿನ ನಂತರವೂ ವ್ಯಾಪಕವಾಗಿ ಟ್ರೋಲ್ ಆಗುತ್ತಿರುವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಬಿಜೆಪಿ ಸೋಲಿನ ಬಳಿಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಲಿನ ಹೊಣೆ ಹೊತ್ತಿದ್ದಾರೆ. ಇದರ ನಂತರವೂ ಅವರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್ ಗೀಡಾಗಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ನಳಿನ್ ಕುಮಾರ್ ಅವರು ಆಡಿರುವ ಮಾತುಗಳನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟ್ರೋಲ್ ಮಾಡಲಾಗುತ್ತಿದೆ. “ಮೇ 13ರಂದು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಕಾಂಗ್ರೆಸ್ ನ ಶವ ಪೆಟ್ಟಿಗೆಗೆ ಮೊಳೆ ಹೊಡೆಯುತ್ತಾರೆ” ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ಹಲವು ವಿವಿಧದ ಟ್ರೋಲ್ ಗಳಲ್ಲಿ ಬಳಕೆಯಾಗಿದೆ.
ಇನ್ನೂ, “ಯಾರ ಪರವಾಗಿ ಹೆಚ್ಚಿನ ಘೋಷಣೆಗಳು ಬರುತ್ತವೋ ಅಂತಹವರಿಗೆ ಟಿಕೆಟ್ ಕೊಡುವುದಿಲ್ಲ, ನಾನು ರಾಜ್ಯಾಧ್ಯಕ್ಷ” ಎಂಬ ಕಟೀಲ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್ ಆಗುತ್ತಿದೆ.
“ಕಾಂಗ್ರೆಸ್ ನ ಹುಲಿಯಾ ಕಾಡಿಗೆ ಹೋಗುತ್ತೆ, ಬಂಡೆ ಒಡೆದು ಹೋಗುತ್ತೆ, ಕಮಲ ವಿಧಾನ ಸಭೆಯ ಒಳಗೆ ಅರಳುತ್ತೆ” ಎಂಬ ನಳಿನ್ ಕುಮಾರ್ ಕಟೀಲ್ ಅವರ ಡೈಲಾಗ್ ಇದೀಗ ವ್ಯಾಪಕವಾಗಿ ಟ್ರೋಲ್ ಆಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw