ಬಜೆಟ್ ಮಂಡನೆಗೂ ಮುನ್ನ ಟ್ವೀಟ್ ಮಾಡಿ ಜನತೆಗೆ ವಿಶೇಷ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಇನ್ನು ಕೆಲವೇ ಹೊತ್ತಿನಲ್ಲಿ ಕರ್ನಾಟಕ ಬಜೆಟ್—2023 ಮಂಡನೆಯಾಗಲಿದ್ದು, ಈಗಾಗಲೇ ಸಿಎಂ ಸಿದ್ದರಾಮಯ್ಯನವರು ವಿಧಾನ ಸಭೆಗೆ ಆಗಮಿಸಿದ್ದಾರೆ.
ಬಜೆಟ್ ಮಂಡನೆಗೂ ಮುನ್ನಾ ರಾಜ್ಯದ ಜನತೆಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ವಿಶೇಷ ಮನವಿ ಮಾಡಿಕೊಂಡಿದ್ದಾರೆ.
ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ ಎಂದು ಅವರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw
ಕರ್ನಾಟಕ ಬಜೆಟ್ LIVE | ನೋಡಿ