ಶಾಕಿಂಗ್ ನ್ಯೂಸ್: ಕರ್ನಾಟಕದಲ್ಲಿ 2 ಒಮಿಕ್ರಾನ್ ಪ್ರಕರಣಗಳು ಪತ್ತೆ
ಬೆಂಗಳೂರು: ಕರ್ನಾಟಕದಲ್ಲಿ ಇಬ್ಬರಿಗೆ ಕೊವಿಡ್ 19 ವೈರಾಣುವಿನ ರೂಪಾಂತರಿ ಸೋಂಕು ಒಮಿಕ್ರಾನ್ ದೃಢಪಟ್ಟಿದ್ದು, ದೇಶದಲ್ಲಿಯೇ ಮೊದಲ ಪ್ರಕರಣವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಟ್ಟು ನಿಟ್ಟಿನ ಕಾನೂನು ಜಾರಿಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರಿಂದ ಸಂಗ್ರಹಿಸಿರುವ ಮಾದರಿಯನ್ನು ಜಿನೋಮಿಕ್ ಸೀಕ್ವೇನ್ ಗೆ ಕಳುಹಿಸಲಾಗಿತ್ತು. ಇದೀಗ ಸೋಂಕಿತರ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಒಮಿಕ್ರಾನ್ ರೂಪಾಂತರಿ ವೈರಸ್ ಪತ್ತೆಯ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಗ್ಯ ಇಲಾಖೆಯಿಂದ ಮಾಹಿತಿ ಸಂಗ್ರಹಿಸಿದ್ದು, ಸಮಗ್ರ ಮಾಹಿತಿ ಪಡೆದುಕೊಂಡ ಬಳಿಕ ಸರ್ಕಾರ ಈ ಬಗ್ಗೆ ಕೈಗೊಳ್ಳಲಿರುವ ನಿರ್ಧಾರಗಳ ಬಗ್ಗೆ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪುತ್ರನ ಮದುವೆಯ ಸಂಭ್ರಮದಲ್ಲಿದ್ದ ದಂಪತಿ ರಸ್ತೆ ಅಪಘಾತದಲ್ಲಿ ದಾರುಣ ಸಾವು!
ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್
ವೋಡಾಫೋನ್ – ಐಡಿಯಾ ವಿರುದ್ಧ ಕೇಸ್ ದಾಖಲಿಸಿದ ಜಿಯೋ!
ಒಕ್ಕಲಿಗರ ಸಂಘದ ಚುನಾವಣೆ: ಆಮಿಷ ಒಡ್ಡಿ ಮತಬೇಡುವವರನ್ನು ಬೆಂಬಲಿಸಬೇಡಿ | ಯುವ ಮುಖಂಡ ಸಚಿನ್ ಸರಗೂರು
‘ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್’: ಹಂಸಲೇಖ ಸಂಯೋಜನೆಯ ಸಂವಿಧಾನ ಗೀತೆ ವೈರಲ್