ಏರೋಸ್ಪೇಸ್ ವಲಯದಲ್ಲಿ ಕರ್ನಾಟಕ ನಂಬರ್ ಒನ್ ಆಗಲು ಅರ್ಹ: ಸಿಎಂ ಬೊಮ್ಮಾಯಿ
ಬೆಂಗಳೂರು : ಏರೋಸ್ಪೇಸ್ ವಲಯದಲ್ಲಿ ಲಂಡನ್ ಮತ್ತು ಸಿಂಗಾಪುರದ ನಂತರ ಕರ್ನಾಟಕ ರಾಜ್ಯವಿದ್ದು, ಕರ್ನಾಟಕ ನಂಬರ್ ಒನ್ ಸ್ಥಾನಕ್ಕೇರಲು ಎಲ್ಲ ಅರ್ಹತೆ ಹೊಂದಿದೆ ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು.
ಏರೊ ಇಂಡಿಯಾ ಶೋ- 2023 ನಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ವಿದೇಶಿ ಗಣ್ಯರು ಹಾಗೂ ಉದ್ಯಮಿಗಳ ಗೌರವಾರ್ಥ ಮುಖ್ಯಮಂತ್ರಿಗಳು ಏರ್ಪಡಿಸಿದ್ದ ಭೋಜನ ಕೂಟದಲ್ಲಿ
ಅತಿಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಬೆಂಗಳೂರು ಸತತ 14 ಬಾರಿ ಏರ್ ಶೋ ಏರ್ಪಡಿಸಿದೆ. ದೇಶದ ಯಾವುದೇ ರಾಜ್ಯ ಇಷ್ಟೊಂದು ಏರ್ ಶೋ ಏರ್ಪಡಿಸಿಲ್ಲ. ಈ ಬಾರಿ ಅತಿ ದೊಡ್ಡ ಶೋ, ಹೆಚ್ಚಿನ ಉದ್ಯಮಿಗಳು ಭಾಗವಹಿಸುತ್ತಿದ್ದು, ಹೆಚ್ಚಿನ ಪ್ರದರ್ಶನಗಳು ನಡೆಯುತ್ತಿದೆ
ಬೆಂಗಳೂರಿನಲ್ಲಿ ಅಪಾರ ಅವಕಾಶಗಳು ಇವೆ. ಇಂಜನಿಯರ್ ಗಳು , ತಂತ್ರಜ್ಞರ ನಿರಂತರ ಶ್ರಮದಿಂದ ಏರ್ ಶೊ ಯಶಸ್ವಿಯಾಗಿ ನಡೆಯುತ್ತಿದೆ.
ನಮ್ಮ ಹಿರಿಯರು 1960 ಯಲ್ಲಿ ಇಲ್ಲಿ ಬಂಡವಾಳ ಹೂಡುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸ ತಂತ್ರಜ್ಞಾನ ಸಾಕಷ್ಟು ಬದಲಾವಣೆ ತಂದಿದೆ. ರಾಜ್ಯದ ಅಧಿಕಾರಿಗಳು ಯಶಸ್ಬಿಯಾಗಿ ಏರ್ ಶೋ ಆಯೋಜನೆ ಮಾಡಿದ್ದಕ್ಕಾಗಿ ಮುಖ್ಯ ಮಂತ್ರಿಗಳು ಅಭಿನಂದಿಸಿದರು.
ನಮ್ಮ ರಾಜ್ಯ ಯುವ ಪ್ರತಿಭಾವಂತ ಉದ್ಯಮಿಗಳು, ತಂತ್ರಜ್ಞರು ಉದ್ಯಮಗಳು ಬೆಳೆಯಲು ಕಾರಣರಾಗಿದ್ದಾರೆ. ಯುವ ಪ್ರತಿಭಾವಂತರಿರುವುದರಿಂದ ಏರೊ ಸ್ಪೇಸ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ.
ಏರೊಸ್ಪೇಸ್ ನೀತಿ ರಾಜ್ಯದಲ್ಲಿದ್ದು, ಸಣ್ಣ ಕೈಗಾರಿಕೆಗಳು ಹಾಗೂ ಬೃಹತ್ ಉದ್ಯಮಗಳಿಗೆ ಸೂಕ್ತ ಅವಕಾಶಗಳಿವೆ. ನಾವು ಶೇ 65% ರಷ್ಟು ರಕ್ಷಣಾ ಉತ್ಪಾದನೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಶೇ 70% ರಷ್ಟು ಉತ್ಪಾದನೆ ಮಾಡುತ್ತೇವೆ.
ಈಗಾಗಲೇ ಅನೇಕರು ಇಲ್ಲಿ ಬಂಡವಾಳ ಹೂಡಿದ್ದಾರೆ, ಇನ್ನು ಅನೇಕರು ಬಂಡವಾಳ ಹೂಡುವ ಇಚ್ಛೆ ಹೊಂದಿದ್ದಾರೆ.
ಯುಎಸ್ ಕಾನ್ಸುಲೇಟ್ ರಾಯಭಾರಿ ಬೆಂಗಳೂರು ಏರೋ ಶೋ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಲ್ಲಿ ಉತ್ತಮ ಪರಿಸರ, ಆರ್ಥಿಕ ಪರಿಸ್ಥಿತಿಯಿದ್ದು,ನಮ್ಮ ಬೆಳವಣಿಗೆಯಲ್ಲಿ ನೀವು ಭಾಗಿದಾರರಾಗಿ ಎಂದು ಕರೆ ನೀಡಿದರು.
ಬೃಹತ್ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣಾ ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw