ಕರ್ನಾಟಕ ಚುನಾವಣಾ ಫಲಿತಾಂಶ ಬಗ್ಗೆ ಭವಿಷ್ಯ ನುಡಿದ ಛತ್ತೀಸ್ ಗಢ ಸಿಎಂ: ಈ ಪಕ್ಷವೇ ಗೆಲ್ಲುತಂತೆ! - Mahanayaka

ಕರ್ನಾಟಕ ಚುನಾವಣಾ ಫಲಿತಾಂಶ ಬಗ್ಗೆ ಭವಿಷ್ಯ ನುಡಿದ ಛತ್ತೀಸ್ ಗಢ ಸಿಎಂ: ಈ ಪಕ್ಷವೇ ಗೆಲ್ಲುತಂತೆ!

bhupesh baghel
11/05/2023

ನವದೆಹಲಿ:  ಕರ್ನಾಟಕ ಚುನಾವಣಾ ಫಲಿತಾಂಶ ಅತ್ಯಂತ ಕುತೂಹಲ ಮೂಡಿಸಿದ್ದು, ಇಡೀ ದೇಶದ ಚಿತ್ತ ಕರ್ನಾಟಕದತ್ತ ನೆಟ್ಟಿದೆ. ಇದೇ ಸಂದರ್ಭದಲ್ಲಿ  ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಕರ್ನಾಟಕ ಚುನಾವಣಾ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ.


Provided by

ಕರ್ನಾಟಕ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು,  ಮೇ 13ರಂದು ಬಿಜೆಪಿ ತಕ್ಕ ಪಾಠ ಕಲಿಯುತ್ತದೆ ಎಂದು ನಾನು ಭಾವಿಸುತ್ತೇನೆ. ಈ ಮೂಲಕ ಕಾಂಗ್ರೆಸ್ ಗೆಲುವು ಖಚಿತ ಎಂದು ಭೂಪೇಶ್ ಬಘೇಲ್ ಅಭಿಪ್ರಾಯಪಟ್ಟರು.

ಕರ್ನಾಟಕದಲ್ಲಿ  ಬಜರಂಗಬಲಿ ಭಗವಂತನ ಆಶೀರ್ವಾದವು ಕಾಂಗ್ರೆಸ್ ಜೊತೆಗೆ ಉಳಿಯುತ್ತದೆ. ದೇವರು ನ್ಯಾಯ, ದಬ್ಬಾಳಿಕೆ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿರುವವನನ್ನು ಶಿಕ್ಷಿಸುತ್ತಾನೆ ಎಂದು ಬಿಜೆಪಿ ವಿರುದ್ಧ ಬಘೇಲ್ ವಾಗ್ದಾಳಿ ನಡೆಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ