ಚುನಾವಣಾ ಫಲಿತಾಂಶ:  ಯಾರಿಗೆ ಸೋಲು?  ಯಾರಿಗೆ ಗೆಲುವು? - Mahanayaka

ಚುನಾವಣಾ ಫಲಿತಾಂಶ:  ಯಾರಿಗೆ ಸೋಲು?  ಯಾರಿಗೆ ಗೆಲುವು?

congres bjp jds
13/05/2023

ಹೊನ್ನಾಳಿಯಲ್ಲಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸೋಲಾಗಿದ್ದು, ಎಂ.ಪಿ.ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು.


Provided by

ಕೊಳ್ಳೇಗಾಲದಲ್ಲಿ ಎನ್.ಮಹೇಶ್ ಗೆ  ಸೋಲಾಗಿದ್ದು, ಕಳೆದ ಬಾರಿ ಬಿಎಸ್ ಪಿಯಿಂದ ಗೆಲುವು ಸಾಧಿಸಿದ್ದ ಎನ್.ಮಹೇಶ್ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು.

ಅಥಣಿಯಲ್ಲಿ ಲಕ್ಷಣ್ ಸವದಿ ಭರ್ಜರಿ ಗೆಲುವು ಸಾಧಿಸಿದ್ದು, ಇತ್ತೀಚೆಗೆ ಬಿಜೆಪಿ ತೊರೆದು ಲಕ್ಷ್ಮಣ್ ಸವದಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದರು.


Provided by

ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ನ ಕೆ.ಆರ್. ಕೃಷ್ಣಮೂರ್ತಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಶಿಗ್ಗಾವಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಹಳ್ಳಿಗೆ ಸೋಲಾಗಿದೆ.

ಚಿತ್ತಾಪುರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಅರಸೀಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಿವಲಿಂಗೇಗೌಡ ಗೆಲುವು ದಾಖಲಿಸಿದ್ದಾರೆ. ಇತ್ತೀಚೆಗೆ ಜೆಡಿಎಸ್ ತೊರೆದು ಅವರು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದರು.

ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೊತ್ತೂರು ಮಂಜುನಾಥ್ ಗೆ ಗೆಲುವು

ಮದ್ದೂರು ಕ್ಷೇತ್ರದಲ್ಲಿ ಉದಯ್ ಗೆ ಗೆಲುವು

130 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿದ್ದ ನಂಬರ್ ಇದೀಗ ಪಕ್ಕಾ ಆಗುತ್ತಿದ್ದು, ಕಾಂಗ್ರೆಸ್ ಗೆ ರಾಜ್ಯದಲ್ಲಿ ಬಹುಮತ ದೊರಕುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ.


ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ