ರಾಗಿಣಿ-ಸಂಜನಾ ಜಾಮೀನು ಅರ್ಜಿ ವಿಚಾರಣೆ | ಕೋರ್ಟ್ ಏನು ಹೇಳಿತು ಗೊತ್ತಾ?

04/11/2020

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್  ದಂಧೆಗೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಅಲಿಯಾಸ್ ಮಹೀರಾ ಮತ್ತು ಪ್ರಶಾಂತ್ ರಾಂಕಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.


ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಸೆಪ್ಟಂಬರ್ 14ರಂದು ನಟಿ ರಾಗಿಣಿಯನ್ನು ಬಂಧಿಸಲಾಗಿತ್ತು. ಎರಡು ದಿನಗಳ ನಂತರ ಸಂಜನಾ ಗಲ್ರಾನಿಯನ್ನು  ನಾಕ್ರೋಟಿಕ್ಸ್ ಕಂಟ್ರೋಲ್ ಬ್ಯುರೋ(ಎನ್ ಸಿಬಿ) ಬಂಧಿಸಿತ್ತು.  ಇನ್ನೂ ಜಾಮೀನು ಅರ್ಜಿ ವಿಚಾರಣೆಯ ವೇಳೆ ನಟಿಯರ ವಿರುದ್ಧ ಯಾವುದೇ ಗಂಭೀರವಾದ ಸಾಕ್ಷಿಗಳು ದೊರಕಿಲ್ಲ ಹಾಗಾಗಿ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಆರೋಪಿಗಳ ಪರ ವಕೀಲರು ವಾದಿಸಿದರು.


ಇನ್ನೂ  ಎನ್ ಸಿಬಿ ಪರ ವಕೀಲರು ವಾದಿಸಿ, ಆರೋಪಿಗಳ ಡಿಜಿಟಲ್ ಸಾಕ್ಷ್ಯಗಳನ್ನು ಸಂಗ್ರಹಿಸಿ ಮಾಹಿತಿ ಪಡೆಯಲಾಗುತ್ತಿದೆ. ಆರೋಪಿಗಳು ಪ್ರಭಾವಿ ವ್ಯಕ್ತಿಗಳಾಗಿರುವುದರಿಂದ ಇವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ, ಸಾಕ್ಷ್ಯ ನಾಶಕ್ಕೆ ಕಾರಣವಾಗಬಹುದು ಎಂದರು.


ಇನ್ನೂ ವಾದ ವಿವಾದಗಳನ್ನು ಆಳಿಸಿದ ನಂತರ, ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರು, ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಜಾಮೀನು ತಿರಸ್ಕರಿಸಿದ ಬಳಿಕ ಈ ಮೂವರು ಆರೋಪಿಗಳನ್ನು ಬೆಂಗಳೂರಿನ ಹೊರ ವಲಯದಲ್ಲಿರುವ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ .


FacebookTwitterWhatsappInstagramEmailTelegram

ಇತ್ತೀಚಿನ ಸುದ್ದಿ

Exit mobile version