ಕರ್ನಾಟಕ ಹೈಕೋರ್ಟ್ ನೇಮಕಾತಿ : 158 ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಅಹ್ವಾನ

Karnataka High Court Recruitment 2025 : ಕರ್ನಾಟಕ ರಾಜ್ಯದ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವಂತಹ 158 ನ್ಯಾಯಾಧೀಶರ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ..
ಈ ಹುದ್ದೆಗಳ ನೇಮಕಾತಿಗೆ ಯಾರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ?
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಮುಗಿಸಿರಬೇಕು. ವಯೋಮಿತಿ ಅರ್ಹತೆ ನೋಡುವುದಾದರೆ ಅಭ್ಯರ್ಥಿಯ ಗರಿಷ್ಟ ವಯೋಮಿತಿ 40 ವರ್ಷ ದಾಟಿರಬಾರದು.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಮೊದಲನೆಯ ಹಂತದಲ್ಲಿ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳಿಗೆ ಬರವಣಿಗೆಯ ಮುಖ್ಯ ಪರೀಕ್ಷೆ ನಡೆಸಿ ನಂತರದಲ್ಲಿ ಸಂದರ್ಶನ ನಡೆಸುವುದರ ಮುಖಾಂತರ ಅಂತಿಮ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಶುಲ್ಕ :
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1,000ರೂ.
* SC, ST ಹಾಗೂ ಪ್ರವರ್ಗ – 1 ರ ಅಭ್ಯರ್ಥಿಗಳಿಗೆ – 500ರೂ.
ಆನ್ಲೈನ್ ಮುಕಾಂತರ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 12 ಮಾರ್ಚ್ 2025
ಅರ್ಜಿ ಸಲ್ಲಿಸುವ ಲಿಂಕ್:
https://karnatakajudiciary.kar.nic.in/newwebsite/recsubnotify.php?p=803&stateNM=
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: