ಹೊಸ ಸಿಎಂ ಹೆಸರು ಘೋಷಣೆಗೆ ಕೌನ್ ಡೌನ್ ಶುರು: ಇಂದು ರಾತ್ರಿಯೇ ಹೊಸ ಸಿಎಂ ಘೋಷಣೆ?
ಬೆಂಗಳೂರು: ರಾಜ್ಯದಲ್ಲಿ ಹೊಸ ಸಿಎಂ ನೇಮಕ ಇಂದು ಸಂಜೆಯೊಳಗೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗಿದ್ದು, ಇಂದು ರಾತ್ರಿ 7 ಗಂಟೆಯ ಬಳಿಕ ಹೊಸ ಸಿಎಂ ಹೆಸರು ಘೋಷಣೆ ಸಾಧ್ಯತೆಗಳಿವೆ ಎಂದು ಇದೀಗ ಮಾಹಿತಿ ಲಭ್ಯವಾಗಿದೆ.
ಹೊಸ ಸಿಎಂ ಹೆಸರು ಘೋಷಣೆಗೆ ಈಗಾಗಲೇ ವೀಕ್ಷಕರು ದೆಹಲಿಯಿಂದ ಬೆಂಗಳೂರಿನತ್ತ ಹೊರಟಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವೀಕ್ಷಕರಾಗಿ ಆಗಮಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಇಂದು ರಾತ್ರಿ 7 ಗಂಟೆಗೆ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಸಿಎಂ ಹೆಸರು ಘೋಷಣೆ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಇಂದು ರಾತ್ರಿ 7 ಗಂಟೆಗೆ ನಡೆಯಲಿರುವ ಸಭೆಯ ಬಗ್ಗೆ ರಾಜ್ಯ ಬಿಜೆಪಿ ಕಚೇರಿಯಿಂದಲೇ ಸೂಚನೆ ಬಂದಿದೆ ಎನ್ನುವ ಮಾಹಿತಿ ಇದೀಗ ಲಭ್ಯವಾಗಿದೆ. ಎಲ್ಲ ಬಿಜೆಪಿ ಶಾಸಕರು ಸಭೆಯಲ್ಲಿ ಭಾಗವಹಿಸಲು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಅವರು ಸೂಚನೆ ನೀಡಿದ್ದಾರೆ ಎನ್ನುವ ಮಾಹಿತಿ ಇದೀಗ ಲಭಿಸಿದೆ.
ಇನ್ನಷ್ಟು ಸುದ್ದಿಗಳು…
ವಿಲನ್ ಗಳಾದರು ಹೈಕಮಾಂಡ್! | ಲಿಂಗಾಯತ ನಾಯಕನನ್ನು ಅವಮಾನಿಸಿ ಕೆಳಗಿಳಿಸಿದ್ಯಾಕೆ?
ಯಡಿಯೂರಪ್ಪ ಕಣ್ಣೀರು ನೋಡಲು ಸಾಧ್ಯವಾಗದೇ ಆತ್ಮಹತ್ಯೆಗೆ ಶರಣಾದ ರಾಜಾಹುಲಿ!
ಏರೆಗ್ಲಾ ಪನೋಡ್ಚಿ…! | “ನಳಿನ್ ಕುಮಾರ್ ಆಡಿಯೋ ಮಿಮಿಕ್ರಿ ಆರ್ಟಿಸ್ಟ್ ಯಾರೆಂದು ತಿಳಿಯಿತು”
ಯಡಿಯೂರಪ್ಪ ವಿರೋಧಿ ಬಣದಿಂದ ಬ್ರಾಹ್ಮಣ ಸಿಎಂಗಾಗಿ ಒತ್ತಡ?
ಮಠಾಧಿಪತಿಗಳಿಗೆ ಸಿಎಂ ಆಗುವ ಕನಸು | ಮಠಾಧಿಪತಿಗಳನ್ನು ಕರ್ನಾಟಕದ ಮುಖ್ಯಮಂತ್ರಿ ಮಾಡಿ ಎಂದ ಸ್ವಾಮೀಜಿ