ಇಂದು 3:30ಕ್ಕೆ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಫಲಿತಾಂಶ ನೋಡುವುದು ಹೇಗೆ? - Mahanayaka
4:18 AM Thursday 21 - November 2024

ಇಂದು 3:30ಕ್ಕೆ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಫಲಿತಾಂಶ ನೋಡುವುದು ಹೇಗೆ?

puc
09/08/2021

ಬೆಂಗಳೂರು:  ಕರ್ನಾಟಕ ರಾಜ್ಯ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು (ಆಗಸ್ಟ್ 9) ಪ್ರಕಟವಾಗಲಿದೆ. ಮಧ್ಯಾಹ್ನ 3:30ಕ್ಕೆ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ(KSEEB) ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿದ್ದು, ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ.

ಜುಲೈ 19 ಹಾಗೂ 22ರಂದು ಎರಡು ದಿನಗಳ ಕಾಲ ಎಸೆಸೆಲ್ಸಿ ಪರೀಕ್ಷೆ ನಡೆದಿದ್ದು, ಶೇ.99.65 ವಿದ್ಯಾರ್ಥಿಗಳು ಹಾಜರಾಗಿದ್ದರು.  ಕೊರೊನಾ ಭೀತಿಯ ನಡುವೆಯೂ ಈ ಬಾರಿ 8,19,694 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆದಿದ್ದಾರೆ.

ಇನ್ನೂ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ ಸೈಟ್ sslc.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.  ನಿಮ್ಮ ರೋಲ್ ನಂಬರ್ ಹಾಗೂ ಅಲ್ಲಿ ಕೇಳಲಾಗುವ ಮಾಹಿತಿಗಳನ್ನು ಸಬ್ಮಿಟ್ ಮಾಡಿ, ತಾತ್ಕಾಲಿಕ ಅಂಕಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಸರ್ವರ್ ಸಮಸ್ಯೆಗಳಿದ್ದರೆ ಇಂದೇ ನಿಮ್ಮ ರಿಸಲ್ಟ್ ಸಿಗಬಹುದು ಎಂದು ಹೇಳಲು ಸಾಧ್ಯವಿಲ್ಲ. ಆದರೆ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಬೇಕಿಲ್ಲ. ನಾಳೆಯೊಳಗೆ ನಿಮ್ಮ ರಿಸಲ್ಟ್ ನ್ನು ಯಾವುದೇ ಸಮಯದಲ್ಲಿ ನೀವು ಪಡೆದುಕೊಳ್ಳಬಹುದಾಗಿದೆ.

ಇನ್ನಷ್ಟು ಸುದ್ದಿಗಳು…




ತಾಯಾಣೆ ನಾನು ಅಷ್ಟೊಂದು ಹಣವನ್ನು ಎಂದಿಗೂ ನೋಡೇ ಇಲ್ಲ | ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ

ಸಚಿವರಾದರೂ ಜೀಪ್ ನಿಂದ ಇಳಿದು ಸಾಮಾನ್ಯರಂತೆ ನಡೆದ ಸಚಿವ ಅಂಗಾರ! | ಇದು ಸರಳತೆ ಅಲ್ಲ, ವೈಫಲ್ಯ!

ವಾಟ್ಸಾಪ್ ಮೂಲಕ ಕೊವಿಡ್ ಲಸಿಕೆ ಪ್ರಮಾಣ ಪತ್ರ ಪಡೆಯುವುದು ಹೇಗೆ?

ನೀವು ಬೆಳೆದ ಬೆಳೆಗಳನ್ನು ಕೊಟ್ಟು, ಐಶಾರಾಮಿ ಕಾರು ಕೊಂಡುಹೋಗಿ: ಟೊಯೋಟಾದಿಂದ ರೈತರಿಗೆ ಆಫರ್

ದಾಳಿಂಬೆ ಹಣ್ಣಿನ ರಸ ಸೇವಿಸಿ, ಈ ರೋಗಗಳಿಂದ ಮುಕ್ತಿ ಪಡೆಯಿರಿ!

 

ಇತ್ತೀಚಿನ ಸುದ್ದಿ