ನಾಳೆ SSLC ಫಲಿತಾಂಶ | ಫಲಿತಾಂಶ ನೋಡೋದು ಹೇಗೆ? | ಇಲ್ಲಿದೆ ವಿವರ - Mahanayaka
5:17 PM Thursday 12 - December 2024

ನಾಳೆ SSLC ಫಲಿತಾಂಶ | ಫಲಿತಾಂಶ ನೋಡೋದು ಹೇಗೆ? | ಇಲ್ಲಿದೆ ವಿವರ

sslc result
07/05/2023

ಬೆಂಗಳೂರು: ನಾಳೆ SSLC ಫಲಿತಾಂಶ ಪ್ರಕಟವಾಗಲಿದ್ದು, ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ  ಪ್ರಕಟಣೆ ಹೊರಡಿಸಿ, ಸೋಮವಾರ ಬೆಳಗ್ಗೆ 10 ಗಂಟೆಗೆ ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ.

11 ಗಂಟೆಯ ನಂತರ ಇಲಾಖೆಯ ವೆಬ್‌ ಸೈಟ್‌ ನಲ್ಲಿ ಪ್ರಕಟಗೊಳ್ಳಲಿದೆ ಎಂದಿದೆ.ಇನ್ನು ಫಲಿತಾಂಶವನ್ನು http://karresults.nic.in  ನಲ್ಲಿ ವೀಕ್ಷಿಸಬಹುದಾಗಿದೆ.

ಮಾರ್ಚ್‌ 31 ರಿಂದ ಏ.15ರವರೆಗೆ 2023ನೇ ಸಾಲಿನ ಎಸ್‌ ಎಸ್‌ ಎಲ್‌ ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ಬಾರಿ ಶಿಕ್ಷಣ ಸಚಿವರ ಬದಲಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ