ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಉಪವಾಸ ಸತ್ಯಾಗ್ರಹ!
ಚೆನ್ನೈ: ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ವಿರೋಧಿಸಿ ತಮಿಳುನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮೇಕೆದಾಟು ಯೋಜನೆ ವಿರೋಧಿಸಿ ಕರ್ನಾಟಕದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.
ಆಗಸ್ಟ್ 5ರಂದು ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾಮಲೈ ತಿಳಿಸಿದ್ದು, ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಡ್ಯಾಮ್ ನಿರ್ಮಿಸುವುದಾಗಿ ಹೇಳಿದ್ದಾರೆ. ನಾವು ಒಂದೇ ಪಕ್ಷದಲ್ಲಿದ್ದರೂ ಪ್ರತಿಭಟನೆಗೆ ನಿರ್ಧರಿಸಿದ್ದೇವೆ. ಕರ್ನಾಟಕ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ಅಣ್ಣಾಮಲೈ ಹೇಳಿದರು.
ತಿರುಚ್ಚಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತಮಿಳುನಾಡು ಬಿಜೆಪಿಯು ಮೇಕೆದಾಟು ಯೋಜನೆಯ ವಿರುದ್ಧವಾಗಿ ತಮಿಳುನಾಡಿನ ಜನತೆ, ರೈತರ ಹಿತಾಸಕ್ತಿಯ ಪರವಾಗಿ ಕಾರ್ಯನಿರ್ವಹಿಸಲಿದೆ. ತಮಿಳುನಾಡಿನ ರೈತರು ಯಾವುದೇ ಸಮಸ್ಯೆಯನ್ನು ಎದುರಿಸಬಾರದು. ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯದ ಪಾಲಿನ ಕಾವೇರಿ ನೀರನ್ನು ತಮಿಳುನಾಡಿಗೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ನ್ಯಾಯಾಧೀಶರನ್ನು ರಸ್ತೆಯಲ್ಲಿಯೇ ಭೀಕರ ಹತ್ಯೆ: ಸಿಸಿ ಕ್ಯಾಮರದಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ
ಬಾಲಕಿಗೆ “ಮನೆಯಲ್ಲಿ ಒಬ್ಬನೇ ಇದ್ದೇನೆ ಬರ್ತಿಯಾ” ಎಂದ ಪೊಲೀಸ್ ಕಾನ್ಸ್ ಟೇಬಲ್ ಅರೆಸ್ಟ್
ಅಶ್ಲೀಲ ಚಿತ್ರ ವಿಚಾರ: ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ನಡುವೆ ಅವರ ಮನೆಯಲ್ಲಿಯೇ ಜಟಾಪಟಿ
ಅರ್ಚಕ ನೀಡಿದ ಪ್ರಸಾದ ಸೇವಿಸಿದ ಭಕ್ತರಿಗೆ ವಾಂತಿ ಭೇದಿ | 20ಕ್ಕೂ ಅಧಿಕ ಅಸ್ವಸ್ಥ
ನದಿ ಬಿದ್ದ ಬಾಲಕಿಯನ್ನು ರಕ್ಷಿಸಲು ಹೋದ ಅತ್ತೆಯೂ ನೀರುಪಾಲು | ನೀರು ಕುಡಿಯಲು ಹೋದ ವೇಳೆ ನಡೆದದ್ದೇನು?