ಕಾಸರಗೋಡು: ಕಾಲುಜಾರಿ ಬಿದ್ದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ನಾಲ್ಕು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ಕಾಲುಸಂಕ ದಾಟುತ್ತಿದ್ದ ವೇಳೆ ಕಾಲುಜಾರಿ ಬಿದ್ದು ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ.
ಕಾಸರಗೋಡು ಜಿಲ್ಲೆಯ ಈಸ್ಟ್ ಎಳೇರಿ ಪಂಚಾಯತ್ ನ ಚಿಟ್ಟಾರಿಕಾಲ್ ಸಮೀಪದ ಕಡುಮೇನಿಯ ನಾರಾಯಣನ್ (45) ಮೃತಪಟ್ಟವರು. ಇವರ ಮೃತದೇಹವು 3 ದಿನಗಳ ತೀವ್ರ ಶೋಧದ ಬಳಿಕ ಇಂದು ಘಟನಾ ನಡೆದ ಸ್ಥಳದಿಂದ 4 ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಎಸ್.ಡಿ.ಆರ್.ಎಫ್. ತಂಡ ಮೇಲೆತ್ತಿದೆ.
ಕೂರ್ನಡ್ಕದಲ್ಲಿ ಗುರುವಾರ ಸಂಜೆ ಕಾಲುಸಂಕ ದಾಟುತ್ತಿದ್ದ ವೇಳೆ ನಾರಾಯಣನ್ ಆಕಸ್ಮಿಕವಾಗಿ ಕಾಲುಜಾರಿ ಪಯಸ್ವಿನಿ ನದಿಯನ್ನು ಸಂಪರ್ಕಿಸುವ ತೋಡಿಗೆ ಬಿದ್ದು ನಾಪತ್ತೆಯಾಗಿದ್ದರು. ಅವರಿಗಾಗಿ ಕಳೆದ ಮೂರು ದಿನಗಳಿಂದ ಅಗ್ನಿಶಾಮಕ ದಳ, ಪೊಲೀಸ್, ಎಸ್.ಡಿ.ಆರ್.ಎಫ್. ತಂಡ ಹಾಗೂ ಸ್ಥಳೀಯ ಈಜುಗಾರರು ಭಾರೀ ಮಳೆಯ ನಡುವೆ ನಿರಂತರ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಮಧ್ಯಾಹ್ನ ಘಟನೆ ಸಂಭವಿಸಿದ ಸ್ಥಳದಿಂದ ಸುಮಾರು 4 ಕಿ.ಮೀ. ದೂರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw