ಕಟ್ಟಿಗೆ ಸಂಗ್ರಹಿಸುತ್ತಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನ

ಬೆಳ್ತಂಗಡಿ: ಕಟ್ಟಿಗೆ ತರಲೆಂದು ತಮ್ಮ ಮನೆಯ ಸಮೀಪದ ಗುಡ್ಡಕ್ಕೆ ತೆರಳಿದ್ದ ವೇಳೆ ಯುವಕನೋರ್ವ ಕತ್ತಿ ಕೇಳುವ ನೆಪದಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದ ಘಟನೆ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ.
ಇಂದಬೆಟ್ಟು ಗ್ರಾಮದ ಲಿಂಗತ್ಯಾರ್ ಹೌಸ್ ನಿವಾಸಿ ಸಂತೋಷ್ (25) ಆರೋಪಿಯಾಗಿದ್ದಾನೆ. ಫೆ. 22ರಂದು ಸಂಜೆ 4 ಗಂಟೆ ಸುಮಾರಿಗೆ ದೇಸೊಟ್ಟು ಎಂಬಲ್ಲಿನ ವಿವಾಹಿತ ಮಹಿಳೆಯೊಬ್ಬರು ಉರುವಲು ಸಂಗ್ರಹಿಸಲು ಮನೆಯ ಸಮೀಪದ ಗುಡ್ಡಕ್ಕೆ ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ಆರೋಪಿಯೂ, ಮಹಿಳೆಯ ಬಳಿ ಇದ್ದ ಕತ್ತಿ ಪಡೆಯುವ ನೆಪದಲ್ಲಿ ಮಾತನಾಡಿದ್ದಾನೆ. ಇದ್ದಕ್ಕಿದ್ದಂತೆ ಆಕೆಯನ್ನು ತನ್ನೆಡೆಗೆ ಎಳೆದುಕೊಂಡು ಮಾನಭಂಗಕ್ಕೆ ಯತ್ನಿಸಿದ್ದಾನೆ. ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದಾಗ, ಘಟನೆಯ ಬಗ್ಗೆ ಬೇರೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಮಹಿಳೆಗೆ ಎಚ್ಚರಿಕೆ ನೀಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಆರೋಪ: ಪಿ ಆರ್ ಓ ವಜಾಕ್ಕೆ ಆಗ್ರಹಿಸಿ ಧರಣಿ
ಪ್ರಿಯಕರನೊಂದಿಗೆ ವಿರಸ: ಫೋನ್ ನಲ್ಲಿ ಮಾತನಾಡುತ್ತಲೇ ನೇಣು ಬಿಗಿದು ಆತ್ಮಹತ್ಯೆಗೈದ ಯುವತಿ
ರಷ್ಯಾ ಶೆಲ್ ದಾಳಿಗೆ 7 ಮಂದಿ ಸಾವು, 9 ಮಂದಿಗೆ ಗಾಯ: ಉಕ್ರೇನ್
ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ
ಪತ್ನಿ ಮೃತಪಟ್ಟಿದ್ದಾಳೆಂದು ರಸ್ತೆಬದಿಯಲ್ಲೇ ಎಸೆದು ಹೋದ ಪತಿ