ಚಾಮರಾಜನಗರದಲ್ಲಿ ಕಾವೇರಿ ಕಿಚ್ಚು: ಖಾಲಿ ಕೊಡ ಪ್ರದರ್ಶಿಸಿ ಆಕ್ರೋಶ - Mahanayaka

ಚಾಮರಾಜನಗರದಲ್ಲಿ ಕಾವೇರಿ ಕಿಚ್ಚು: ಖಾಲಿ ಕೊಡ ಪ್ರದರ್ಶಿಸಿ ಆಕ್ರೋಶ

chamarajanagar
19/09/2023

ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮ‌ ಖಂಡಿಸಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜನಗರ ಜಿಲ್ಲಾಡಳಿತ ಭವನ ಮುಂಭಾಗ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಖಾಲಿ ಕೊಡಗಳನ್ನು ಪ್ರದರ್ಶನ ಮಾಡಿ ತಮಿಳುನಾಡು, ಕರ್ನಾಟಕ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಕನ್ನಡಿಗರು, ರೈತರ ವಿರೋಧದ ನಡುವೆಯೂ ತಮಿಳುನಾಡಿಗೆ ಸರ್ಕಾರ ನೀರನ್ನು ಹರಿಸುತ್ತಿದೆ,
ಸರ್ಕಾರ ತಮಿಳುನಾಡಿಗೆ ಬಕೆಟ್ ಹಿಡಿಯುತ್ತಿದೆ ಎಂದು ವ್ಯಂಗ್ಯ ಮಾಡಿದ ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆಗಳನ್ನು ಕೂಗಿ ಕಿಡಿಕಾರಿದರು.


Provided by

ಕೂಡಲೇ, ತಮಿಳುನಾಡಿಗೆ ಹರಿಸುವ ನೀರನ್ನು ಬಂದ್ ಮಾಡಬೇಕು ಇಲ್ಲದಿದ್ದರೇ ಹೋರಾಟವನ್ನು ಉಗ್ರಗೊಳಿಸಲಾಗುವುದು, ಯಾವುದೇ ಕಾರಣಕ್ಕೂ ರಾಜ್ಯದ ರೈತರ ಹಿತವನ್ನು ಬಲಿ ಕೊಡಬಾರದು, ತಮಿಳುನಾಡು ಕಾವೇರಿ ಕ್ಯಾತೆಯನ್ನು ಮುಂದುವರೆಸುತ್ತಿದ್ದರೇ ಗಡಿ ಬಂದ್ ಮಾಡಿ, ತಮಿಳುನಾಡು ವಾಹನಗಳು ರಾಜ್ಯ ಪ್ರವೇಶ ಮಾಡದಂತೆ ಮಾಡುತ್ತೇವೆ ಎಂದು ಹೋರಾಟಗಾರರು ಎಚ್ಚರಿಕೆ ಕೊಟ್ಟರು.

ಇತ್ತೀಚಿನ ಸುದ್ದಿ