ದಿಲ್ಲಿ, ಪಂಜಾಬ್ ಸಿಎಂ ನೇತೃತ್ವದಲ್ಲಿ ‘ತಿರಂಗ ಯಾತ್ರೆ’: ಇದ್ರ ಹಿಂದಿರೋ ಟಾರ್ಗೆಟ್ ಏನು..?
ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತಿರಂಗ ಯಾತ್ರೆ ನಡೆಸಲಿದ್ದಾರೆ.
ಇಂದು ಜಿಂದ್ ಜಿಲ್ಲೆಯಲ್ಲಿ ಈ ಯಾತ್ರೆ ನಡೆಯಲಿದೆ. ಈ ಕುರಿತು ಮಾತನಾಡಿದ ಎಎಪಿಯ ಹರಿಯಾಣ ಘಟಕದ ಮುಖ್ಯಸ್ಥ ಸುಶೀಲ್ ಕುಮಾರ್ ಗುಪ್ತಾ, ಈ ಕಾರ್ಯಕ್ರಮವು ಮುಂದಿನ ವರ್ಷ ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಯ ಪಕ್ಷದ ಪ್ರಚಾರದ ಭಾಗವಾಗಿದೆ. ರಾಜ್ಯಸಭಾ ಸಂಸದ ಗುಪ್ತಾ ಮಾತನಾಡಿ, ರಾಜ್ಯದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ, ಅದು ತಿರಂಗಾ ಯಾತ್ರೆ ಮೂಲಕ ಬರಲಿದೆ ಎಂದಿದ್ದಾರೆ.
ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ ಆಡಳಿತವನ್ನು ಕಿತ್ತೊಗೆಯಲಾಗುವುದು ಗುಪ್ತಾ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷವು ದೇಶದ 4 ರಾಜ್ಯಗಳಾದ ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳ ಮೇಲೆ ಕೇಂದ್ರೀಕರಿಸಿದೆ. ಆದರೆ, ಹರಿಯಾಣಕ್ಕೂ ಮುನ್ನ ಈ ವರ್ಷ ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw