ದಿಲ್ಲಿ ವಿಧಾನಸಭಾ ಚುನಾವಣೆ: ‘ಇದು ಸಿದ್ದಾಂತಗಳ ಯುದ್ಧ’ ಎಂದ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭಾನುವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಿಲ್ಲಿ ವಿಧಾನಸಭಾ ಚುನಾವಣೆಯನ್ನು ಸಿದ್ಧಾಂತಗಳ ಯುದ್ಧ ಎಂದು ಕರೆದಿದ್ದಾರೆ. ಈ ಮೂಲಕ ಅವರು ಆಡಳಿತಾರೂಢ ಎಎಪಿ ಮತ್ತು ಬಿಜೆಪಿ ನಡುವಿನ ವ್ಯತ್ಯಾಸವನ್ನು ತೋರಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಕೇವಲ ರಾಷ್ಟ್ರ ರಾಜಧಾನಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಸ್ಪರ್ಧೆಯಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿ ಮುಖ್ಯಸ್ಥರು, ಈ ಚುನಾವಣೆ ಎರಡು ವ್ಯತಿರಿಕ್ತ ಸಿದ್ಧಾಂತಗಳನ್ನು ಹೊಂದಿದೆ. ಒಂದು ಸಾಮಾನ್ಯ ಜನರ ಕಲ್ಯಾಣದ ಮೇಲೆ ಕೇಂದ್ರೀಕರಿಸಿದೆ ಮತ್ತು ಇನ್ನೊಂದು ಆಯ್ದ ಶ್ರೀಮಂತ ವ್ಯಕ್ತಿಗಳ ಗುಂಪಿಗೆ ಪ್ರಯೋಜನವನ್ನು ನೀಡುತ್ತದೆ. ಪರಸ್ಪರ ವಿರುದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj