ಕೆಳಜಾತಿಯ ಯುವಕನೊಂದಿಗೆ ಪುತ್ರಿ ಮದುವೆ: ರುಬ್ಬುವ ಕಲ್ಲು ಎತ್ತಿ ಹಾಕಿ ಹೆಂಡತಿ ಮಕ್ಕಳ ಹತ್ಯೆಗೈದು ತಾನೂ ಆತ್ಮಹತ್ಯೆಗೈದ ತಂದೆ
ಚೆನ್ನೈ: ಕೆಳಜಾತಿಯ ಯುವಕನನ್ನು ಪುತ್ರಿ ಮದುವೆಯಾಗಿದ್ದಾಳೆ ಎಂಬ ಅವಮಾನ ತಾಳಲಾರದೆ ತಂದೆ ಮನೆಯವರನ್ನೆಲ್ಲ ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಟೀ ಅಂಗಡಿ ನಡೆಸುತ್ತಿದ್ದ ಲಕ್ಷ್ಮಣನ್ ತನ್ನ ಹಿರಿಯ ಮಗಳು ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕಾಗಿ ಮನನೊಂದಿದ್ದರು. ಹೀಗಾಗಿ ಅವರು ತಮ್ಮ ಹೆಂಡತಿ, ಮಕ್ಕಳನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದ ಅವರ ಮಗಳು ಈಗ ಪತಿಯೊಂದಿಗೆ ವಾಸಿಸುತ್ತಿದ್ದು, ಸುರಕ್ಷಿತವಾಗಿದ್ದಾರೆ ಎಂದಿದ್ದಾರೆ ಎಂದು ನಾಗಪಟ್ಟಣಂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಜಿ.ಜವಾಹರ್ ಮಾಹಿತಿ ನೀಡಿದ್ದಾರೆ.
ಘಟನೆ ವಿವರ: ಮಗಳ ಮದುವೆ ವಿಚಾರವಾಗಿ ನೊಂದ ಲಕ್ಷ್ಮಣನ್, ರಾತ್ರಿ ವೇಳೆ ರುಬ್ಬುವ ಕಲ್ಲನ್ನು ತೆಗೆದುಕೊಂಡು ತನ್ನ ಪತ್ನಿ ಭುವನೇಶ್ವರಿ ಮತ್ತು ಇಬ್ಬರು ಕಿರಿಯ ಪುತ್ರಿಯರಾದ ವಿನೋತಿನಿ ಮತ್ತು ಅಕ್ಷಯಾ ಅವರನ್ನು ಬರ್ಬರವಾಗಿ ಹತ್ಯೆ ಗೈದಿದ್ದಾನೆ. ನಂತರ ಲಕ್ಷ್ಮಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇಂದು ಬೆಳಗ್ಗೆ ಲಕ್ಷ್ಮಣನ್ ಟೀ ಅಂಗಡಿ ತೆರೆಯದ ಕಾರಣ ಅಕ್ಕಪಕ್ಕದ ಮನೆಯವರು ಬೆಳಗ್ಗೆ 7 ಗಂಟೆ ಸುಮಾರಿಗೆ ಅವರ ಮನೆ ಬಳಿ ಬಂದು ನೋಡಿದ್ದಾರೆ. ಆಗ ಲಕ್ಷ್ಮಣನ ಕುಟುಂಬಸ್ಥರು ಸಾವನ್ನಪ್ಪಿರುವುದು ತಿಳಿದಿದೆ.
ಮಾಹಿತಿ ಪಡೆದ ಪೊಲೀಸರು ಶವಗಳನ್ನು ಶವಪರೀಕ್ಷೆಗಾಗಿ ನಾಗಪಟ್ಟಣಂ ಸರ್ಕಾರಿ ಜನರಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ನಾಗಪಟ್ಟಣಂ ಜಿಲ್ಲೆಯ ಎಸ್‌ಪಿ ಜವಾಹರ್ ಸ್ಥಳಕ್ಕೆ ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಆಸ್ತಿ ವಿಚಾರ: ಹೆತ್ತ ತಾಯಿಗೆ ಕ್ರೂರವಾಗಿ ಥಳಿಸಿದ ಮಗ
ಬಹು ನಿರೀಕ್ಷಿತ ‘ಜೇಮ್ಸ್’ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್
ಮಹಿಳೆ ಶವ ಪತ್ತೆ: ಅತ್ಯಾಚಾರ, ಕೊಲೆ ಶಂಕೆ
ಬಿಹಾರದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಖಾಲಿ ರೈಲು