ಕೆಲಸಕ್ಕೆ ತೆರಳಿದ್ದ ಮಹಿಳೆಯ ಬರ್ಬರ ಹತ್ಯೆ!

15/02/2021

ಬಳ್ಳಾರಿ:   ಮನೆ ಕೆಲಸಕ್ಕೆ ತೆರಳಿದ್ದ ಮಹಿಳೆ ಬರ್ಬರವಾಗಿ ಹತ್ಯೆಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಡೆದಿದ್ದು,  ನಗರದ 8ನೇ ವಾರ್ಡ್ ನ ಮಲ್ಲಿಕಾರ್ಜುನ ಕಲ್ಯಾಣ ಮಂಟಪದ ಬಳಿ ಮಹಿಳೆಯ  ಮೃತದೇಹ ಪತ್ತೆಯಾಗಿದೆ.

35 ವರ್ಷ ವಯಸ್ಸಿನ ನಾಗಮ್ಮ ಎಂಬವರು ಮೃತಪಟ್ಟ ಮಹಿಳೆಯಾಗಿದ್ದಾರೆ.  ಮನೆ ಕೆಲಸಗಳನ್ನು ಮಾಡುತ್ತಾ ನಾಗಮ್ಮ ಜೀವನ ಸಾಗಿಸುತ್ತಿದ್ದರು. ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ವೇಳೆ ನಾಗಮ್ಮ ಅವರ ತಲೆಗೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ನಾಗಮ್ಮ ಅವರ ಮೃತದೇಹವನ್ನು ನೋಡಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಷಯ ತಿಳಿದ ಕಂಪ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು,  ತನಿಖೆ ಆರಂಭಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version