ಕೆಂಪುಕೋಟೆ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ದ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ

ಬೆಳ್ತಂಗಡಿ: ಕೆಂಪುಕೋಟೆಯ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ದ ಎಂದು ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕಾಂಗ್ರೆಸ್ ಷಡ್ಯಂತ್ರ, ಪ್ರೇರಣೆ ಮತ್ತು ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕೆಂಪು ಕೋಟೆ ಮೇಲೆ ಭಗವಧ್ವಜ ಹಾರಿಸ್ತೀವಿ ಅಂತ ಈಶ್ವರಪ್ಪ ಹೇಳಿದ್ರು ಅನ್ನೋ ಕಾರಣಕ್ಕೆ ಅಧಿವೇಶನ ಮೊಟಕುಗೊಳಿಸಿದ್ರು. ಆದರೆ ಬೆಳ್ತಂಗಡಿಯ ಈ ಸಭೆಯಲ್ಲಿ ಬೆಳ್ತಂಗಡಿ ಶಾಸಕನಾಗಿ ನಾನು ಹೇಳ್ತೀನಿ. ಈ ಹಿಂದೂ ಸಮಾಜ ಕೆಂಪು ಕೋಟೆಯ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ಧ. ಭಗವಧ್ವಜ ಹಾರಿಸೋದನ್ನು ಯಾರಿಂದಲೂ ತಪ್ಪಿಸಲಾಗದು ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಮಾಜದ ಸಂಕಲ್ಪ. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಬಾಲಗಂಗಾಧರ ತಿಲಕರು ಭಗವಧ್ವಜ ಎದುರಿಟ್ಟು ಹೋರಾಟ ಮಾಡಿದರು. ಅದಕ್ಕೂ ಮೊದಲು ಹಿಂದೂ ಸಮಾಜದ ಶಕ್ತಿಯಾಗಿದ್ದ ಶಿವಾಜಿ ಮಹಾರಾಜರ ಶಕ್ತಿಯೂ ಭಗವಧ್ವಜ ಆಗಿತ್ತು ಎಂದು ಪೂಂಜಾ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪ್ರೀತಿಗೆ ಪೋಷಕರ ವಿರೋಧ: ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ
ಮದ್ಯದ ಅಮಲಿನಲ್ಲಿ ಪೊಲೀಸರ ಮೇಲೆ ಹಲ್ಲೆ: ವಿದೇಶಿ ಪ್ರಜೆ ಸೆರೆ
ಫುಡ್ ಡೆಲಿವರಿ ಬಾಯ್ ಅಪಹರಣ: 6 ಮಂದಿ ಆರೋಪಿಗಳ ಬಂಧನ
ರಷ್ಯಾ-ಉಕ್ರೇನ್ ಯುದ್ದ: ತನ್ನ ಸರ್ಕಾರದ ವಿರುದ್ದವೇ ಹರಿಹಾಯ್ದ ಬಿಜೆಪಿ ಸಂಸದ ವರುಣ್ ಗಾಂಧಿ