ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಗೂ ಸಿಡಿ ಭೀತಿ! - Mahanayaka
4:29 PM Saturday 14 - December 2024

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಗೂ ಸಿಡಿ ಭೀತಿ!

sadananda gowda
03/07/2021

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೂ ಸಿಡಿ ಭೀತಿ ಉಂಟಾಗಿದ್ದು,  ತನ್ನ ವಿರುದ್ಧ ಯಾವುದೇ ಮಾನ ಹಾನಿಕರ ಸುದ್ದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಕೋರ್ಟ್ ನಿಂದ  ನಿರ್ಬಂಧಕಾಜ್ಞೆ ಪಡೆದಿದ್ದಾರೆ.

ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್ ಗಳಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿಗಳು ಪ್ರಕಟವಾಗು ಸಾಧ್ಯತೆ ಇದೆ.  ನಕಲಿ ಸಿಡಿ ಸೃಷ್ಟಿಸಿ ಸುಳ್ಳು ಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ ಎಂದು ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಎಂದು ಹೇಳಲಾಗಿದೆ.

ಈ ಹಿಂದೆ ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ, ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ ಕುರಿತು ನಕಲಿ ವಿಡಿಯೋ ಮಾಡಲಾಗಿತ್ತು ಎಂದು ಸದಾನಂದ ಗೌಡ ವಿಡಿಯೋ ಸಂಬಂಧ ಹಳೆಗ ಘಟನೆಗಳನ್ನು ಉಲ್ಲೇಖಿಸಿದ್ದಾರೆ.

ಇನ್ನೂ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವೈಯಕ್ತಿಕ ತೇಜೋವಧೆಗೆ ಪ್ರಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ‌ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದು ಎಂದು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ