12:08 PM Wednesday 12 - March 2025

ಬಟ್ಟೆ ಅಂಗಡಿ ಮಾಲಕಿಯನ್ನು 30ಕ್ಕೂ ಹೆಚ್ಚು ಬಾರಿ ಇರಿದು ಹತ್ಯೆ!

rincy
18/03/2022

ತ್ರಿಶೂರ್: ನಿನ್ನೆ ಕೊಡಂಗಲ್ಲೂರಿನಲ್ಲಿ ಬಟ್ಟೆ ಅಂಗಡಿಯೊಂದರ ಮಾಲಕಿಯನ್ನು ಯುವಕನೊಬ್ಬ ಬರ್ಬರವಾಗಿ  ಹತ್ಯೆಗೈದಿರುವ ಘಟನೆ ನಡೆದಿದೆ.

ವಿಲಂಗರಪರಂಬಿಲ್‌ ನಾಸರ್ ಅವರ ಪತ್ನಿ ರಿನ್ಸಿ ಅವರು  ಹತ್ಯೆಯಾದ ಮಹಿಳೆಯಾಗಿದ್ದಾರೆ.  ರಿನ್ಸಿ ಅವರ ಮೃತದೇಹದ ಮೇಲೆ ಮೂವತ್ತಕ್ಕೂ ಹೆಚ್ಚು ಗಾಯಗಳು ಪತ್ತೆಯಾಗಿದ್ದು, ಕೃತ್ಯದ ಬಳಿಕ  ಆರೋಪಿ ರಿಯಾಜ್ ತಲೆಮರೆಸಿಕೊಂಡಿದ್ದಾನೆ.

ನಿನ್ನೆ ರಾತ್ರಿ ಬಟ್ಟೆ ಅಂಗಡಿಯಿಂದ ತನ್ನ  ಹತ್ತು- ಹದಿನೈದು ವರ್ಷದ ಮಕ್ಕಳನ್ನು ಕರೆದುಕೊಂಡು ರಿನ್ಸಿ ಸ್ಕೂಟರ್‌ ನಲ್ಲಿ ಮನೆಗೆ ಹೊರಟಿದ್ದರು. ಈ ವೇಳೆ ವೇಳೆ ರಸ್ತೆ ಮಧ್ಯೆ ರಿಯಾಜ್ ಅಡ್ಡಗಟ್ಟಿ  ರಿನ್ಸಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ರಿನ್ಸಿಯ ಮೇಲೆ  30ಕ್ಕೂ ಹೆಚ್ಚು ಗಾಯಗಳಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ರಿನ್ಸಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ಮೃತಪಟ್ಟಿದ್ದಾರೆ.

ರಿಯಾಜ್‌ ಗೆ ಮೊದಲೇ  ಮೃತ  ಮಹಿಳೆಯೊಂದಿಗೆ  ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಈ ಕಾರಣದಿಂದಾಗಿ ರಿಯಾಜ್ ನ್ನು ಕೆಲಸದಿಂದ ತೆಗೆದುಹಾಕಿದ್ದರು.  ಆದರೆ ಇದಾದ ಬಳಿಕವೂ  ಹಲವು ಬಾರಿ  ರಿನ್ಸಿಯ ಮನೆಗೆ ಮತ್ತು ಅಂಗಡಿಗೆ ಹೋಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಕೊಡುಂಗಲ್ಲೂರು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಲ್ಲಂಗಡಿ ಹಣ್ಣು ಕತ್ತರಿಸಿ ಗೆಳತಿಯ ಹುಟ್ಟುಹಬ್ಬ ಆಚರಣೆ: ವಿದ್ಯಾರ್ಥಿಗೆ ಶಿಕ್ಷಕರಿಂದ ಥಳಿತ

ಮಗಳಿಗೆ ಅಪ್ಪ ಬೇಡ ಎಂದರೆ ಆಸ್ತಿ ಹಕ್ಕು ಇರುವುದಿಲ್ಲ: ಸುಪ್ರೀಂಕೋರ್ಟ್

ಮುಂದಿನ ತಿಂಗಳಿನಲ್ಲಿ  ಅಪ್ಪಳಿಸಲಿದೆ ಈ ವರ್ಷದ ಮೊದಲ ಚಂಡಮಾರುತ

18 ಸರ್ಕಾರಿ ಕಚೇರಿ ಅಧಿಕಾರಿಗಳ ಅಕ್ರಮ ಆಸ್ತಿ ಬಯಲಿಗೆಳೆದ ಎಸಿಬಿ

ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಈ ಆಹಾರಗಳನ್ನು ಸೇವಿಸಿ

ಇತ್ತೀಚಿನ ಸುದ್ದಿ

Exit mobile version