ಕೇರಳದಲ್ಲಿ ಮಂಕಿಪಾಕ್ಸ್ ಭೀತಿ: ಮತ್ತೊಬ್ಬ ವ್ಯಕ್ತಿಗೆ ಮಂಗನ ಕಾಯಿಲೆ ದೃಢ
ತಿರುವನಂತಪುರಂ: ರಾಜ್ಯದಲ್ಲಿ ಮತ್ತೊಬ್ಬರಿಗೆ ಮಂಗನ ಕಾಯಿಲೆ ಇರುವುದು ದೃಢಪಟ್ಟಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.
ಕಣ್ಣೂರು ಮೂಲದ ವ್ಯಕ್ತಿಯೊಬ್ಬರಿಗೆ ಮಂಕಿಫಾಕ್ಸ್ ಸೋಂಕು ಕಾಣಿಸಿಕೊಂಡಿದ್ದು, ಅವರು ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರೋಗಿಯ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ. ಅವರೊಂದಿಗೆ ನಿಕಟ ಸಂಪರ್ಕದಲ್ಲಿರುವವರ ಮೇಲೆ ನಿಗಾ ಇರಿಸಲಾಗಿದೆ ಎಂದು ಸಚಿವರು ಹೇಳಿದರು.
ರಾಜ್ಯದಲ್ಲಿ ಮಂಗನ ಕಾಯಿಲೆ ತಡೆ ಕಾರ್ಯ ಚುರುಕುಗೊಳಿಸಲಾಗಿದೆ. ಚಿಕನ್ ಪಾಕ್ಸ್ ರೋಗಲಕ್ಷಣಗಳನ್ನು ಹೊಂದಿರುವ ಜನರನ್ನು ಗಮನಿಸಿ, ಅವರಿಗೆ ಮಂಕಿಪಾಕ್ಸ್ ಇಲ್ಲ ಎಂದು ಖಚಿತಪಡಿಸಿ ಕೊಳ್ಳಬೇಕಾಗಿದೆ ಎಂದು ಸಚಿವರು ತಿಳಿಸಿದರು.
ವಿಮಾನ ನಿಲ್ದಾಣದಲ್ಲಿ ಕಣ್ಗಾವಲು ಬಲಪಡಿಸಲಾಗುವುದು. ಇದರ ಭಾಗವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಯಾವುದೇ ರೋಗಲಕ್ಷಣಗಳು ಕಂಡುಬಂದರೆ ಅವರನ್ನು ಪ್ರತ್ಯೇಕಿಸುವ ವ್ಯವಸ್ಥೆಯನ್ನು ಸಹ ಜಾರಿಗೆ ತರಲಾಗುತ್ತದೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka