ಕೇರಳದ ಮೂಲದ ವಿದ್ಯಾರ್ಥಿನಿ ಮಂಗಳೂರಿನ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ!
ಮಂಗಳೂರು: ಕೇರಳದ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಮಂಗಳೂರಿನ ಕಾಲೇಜು ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ತನ್ನ ಡೈರಿಯಲ್ಲಿ ವಿದ್ಯಾರ್ಥಿನಿ ಬರೆದಿಟ್ಟಿದ್ದಾರೆ ಎಂದು ವರದಿಯಾಗಿದೆ.
ಮಂಗಳೂರು ಕದ್ರಿಯಲ್ಲಿ ಈ ಘಟನೆ ನಡೆದಿದ್ದು, 19 ವರ್ಷ ವಯಸ್ಸಿನ ನೀನಾ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿಯಾಗಿದ್ದು, ಇವರು ಕೇರಳದ ಕಾಸರಗೋಡಿನ ನಿವಾಸಿಯಾಗಿದ್ದಾರೆ. ನಗರದ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.
ತಮ್ಮ ಡೆತ್ ನೋಟ್ ನಲ್ಲಿ, ತಾಯಿಗೆ ಕಷ್ಟ ಇದೆ. ನನ್ನ ವಿದ್ಯಾಭ್ಯಾಸದ ಆರ್ಥಿಕ ಹೊರೆಯಾಗುತ್ತಿದೆ. ನನಗೂ ವಿದ್ಯಾಭ್ಯಾಸಕ್ಕೆ ಪೂರ್ಣ ಗಮನ ನೀಡಲಾಗುತ್ತಿಲ್ಲ. ವಿದ್ಯಾಭ್ಯಾಸದಲ್ಲಿಯೂ ಹಿಂದೆ ಬಿದ್ದಿದ್ದೇನೆ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಹಿಂಸೆಗೆ ಪ್ರಚೋದಿಸುವ ದುರುದ್ದೇಶದಿಂದಲೇ ರೈತರ ಹತ್ಯೆ ನಡೆದಿದೆ | ರವಿಕಿರಣ್ ಪೂನಚ
ಕಾರ್ಮಿಕರ ಮೇಲೆ ಗುಂಡು ಹಾರಾಟ ಪ್ರಕರಣ ದಿಕ್ಕು ತಪ್ಪದ ರೀತಿಯಲ್ಲಿ ಸಮಗ್ರ ತನಿಖೆ ನಡೆಸಿ | ಡಿವೈಎಫ್ ಐ ಆಗ್ರಹ
ಅಮಾನವೀಯ ಘಟನೆ: ರಾತ್ರೋ ರಾತ್ರಿ ಮನೆಯಲ್ಲಿದ್ದವರನ್ನ ಹೊರದಬ್ಬಿ ಬೀಗ ಜಡಿದ ಬ್ಯಾಂಕ್ ಸಿಬ್ಬಂದಿ!
ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್: LPG ಸಿಲಿಂಡರ್ ಗೆ 15 ರೂಪಾಯಿ ಏರಿಕೆ
ಆರೆಸ್ಸೆಸ್ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಅಜ್ಞಾನ, ಭೀತಿ, ವೈಯಕ್ತಿಕ ಹತಾಶೆಯಾಗಿದೆ | ಬಿ.ವೈ.ವಿಜಯೇಂದ್ರ ಕಿಡಿ
ಸಚಿವ ಸಿ.ಸಿ.ಪಾಟೀಲ್ ಕಾರು ಬೈಕ್ ಗೆ ಡಿಕ್ಕಿ | ಬೈಕ್ ಸವಾರನನ್ನು ಬಿಟ್ಟು ಸಚಿವರನ್ನು ರಕ್ಷಿಸಲು ಪೊಲೀಸರಿಂದ ಯತ್ನ!?