ಕೊಲೆ ಪ್ರಕರಣದ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಸಿರಾಜ್ (28) ಎಂಬಾತನಾಗಿದ್ದಾನೆ. ಗುರುವಾಯನ ಕೆರೆಯ ಕುವೆಟ್ಟುವಿನಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ ಪೊಲೀಸರು ಈತನ ತನ್ನ ಬಂಧಿಸಿದ್ದರು.
ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನ್ಯಾಯಾಲಯ ಈತನ ವಿರುದ್ದ ವಾರೆಂಟ್ ಹೊರಡಿಸಿತ್ತು. ಬೆಳ್ತಂಗಡಿ ಪೊಲೀಸರು ಇದೀಗ ಆರೋಪಿಯನ್ನು ಕಾಸರಗೋಡಿನ ಈತನ ಮನೆಯ ಸಮೀಪದಿಂದ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಇದೀಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw