ಭಾರೀ ಮಳೆ, ಭೂಕುಸಿತಕ್ಕೆ ಕೇರಳದಲ್ಲಿ 18 ಮಂದಿ ಬಲಿ: ಕೇರಳದಲ್ಲಿ ಇಂದು ಕೂಡ ರೆಡ್ ಅಲಾರ್ಟ್!
ತಿರುವನಂತಪುರಂ: ಕೇರಳದ ದಕ್ಷಿಣ ಮತ್ತು ಕೇಂದ್ರ ಭಾಗದಲ್ಲಿ ಸುರಿದ ಭಾರೀ ಮಳೆ ಹಾಗೂ ಭೂಕುಸಿತದಿಂದಾಗಿ 18 ಮಂದಿ ಮೃತಪಟ್ಟು ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.
ರಾಜ್ಯದ ಪರಿಸ್ಥಿತಿಯ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆತಂಕ ವ್ಯಕ್ತಪಡಿಸಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಪರಿಸ್ಥಿತಿ ನಿಜವಾಗಿಯೂ ಗಂಭೀರವಾಗಿದೆ. ಜನರ ಜೀವ ಉಳಿಸಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡಲಿದ್ದೇವೆ. ಸೇನೆ, ವಾಯುಪಡೆ ಮತ್ತು ನೌಕಾದಳದ ನೆರವು ಕೋರಿದ್ದೇವೆ. ನಿರಾಶ್ರಿತರ ಶಿಬಿರಗಳನ್ನು ತೆರೆಯಲಾಗಿದೆ ಎಂದು ಹೇಳಿದ್ದಾರೆ.
ಕೇರಳದ ಪಟ್ಟಣಂತಿಟ್ಟ, ಕೋಟಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಅತಿಹೆಚ್ಚು ಹಾನಿ ಸಂಭವಿಸಿದೆ. ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ರಕ್ಷಿಸುವಂತೆ ಹಾಗೂ ಪ್ರವಾಹ ಮತ್ತು ಭೂಕುಸಿತ ಸಂಭವಿಸಬಹುದಾದ ಸ್ಥಳಗಳಿಂದ ಜನರನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಪಿಣರಾಯಿ ಸೂಚನೆ ನೀಡಿದ್ದಾರೆ.
5 ಜಿಲ್ಲೆಗಳಲ್ಲಿ ಮತ್ತೆ ರೆಡ್ ಅಲಾರ್ಟ್
ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪಟ್ಟಣಂತಿಟ್ಟ, ಕೋಟಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇನ್ನೂ ಭಾರಿ ಮಳೆ ಸುರಿಯುತ್ತಿರುವ ತಿರುವನಂತಪುರಂ, ಕೊಲ್ಲಂ, ಅಲಪ್ಪುಳ, ಪಾಲಕ್ಕಾಡು, ಮಲಪ್ಪುರಂ, ಕೋಯಿಕೋಡ್ ಮತ್ತು ವಯನಾಡು ಜಿಲ್ಲೆಗಳಲ್ಲೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ಬಸ್ – ಮ್ಯಾಕ್ಸಿಕ್ಯಾಬ್ ನಡುವೆ ಭೀಕರ ಅಪಘಾತ ಮೂವರು ರೈತರ ದಾರುಣ ಸಾವು
ನಡು ಬೀದಿಯಲ್ಲಿ ತಲ್ವಾರ್ ಝಳಪಿಸುತ್ತಾ ಡಿಜೆಗೆ ಸ್ಟೆಪ್ ಹಾಕಿದ ಹಿಂದುತ್ವ ಕಾರ್ಯಕರ್ತರು!
“ಬಸ್ಸಿನಲ್ಲಿ ಓಡಾಡುತ್ತಿದ್ದ ಬಜರಂಗದಳದ ಕಾರ್ಯಕರ್ತ ಸಿ.ಟಿ.ರವಿ ಕೋಟಿ ರವಿ ಆಗಿದ್ದು ಹೇಗೆ?”
ಉಗ್ರಪ್ಪಗೆ ರಕ್ಷಣೆ ಸಲೀಂ ಅವರ ಉಚ್ಛಾಟನೆ: “ಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು” | ಕುಮಾರಸ್ವಾಮಿ ಕಿಡಿ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ | ಏಮ್ಸ್ ಅಧಿಕಾರಿ ಮಾಹಿತಿ
ಕದ್ರಿ ಐತಿಹಾಸಿಕ ಬೌದ್ಧ ಸ್ಥಳ ವೀಕ್ಷಣೆ: 54 ಬೌದ್ಧ ಬಿಕ್ಕುಗಳ ಕರಾವಳಿ ಪ್ರವಾಸ
ತ್ರಿಶೂಲ ದೀಕ್ಷೆ ನೀಡಿದ್ದೇವೆಯೇ ಹೊರತು ಬಾಂಬ್, ಗ್ರೆನೈಡ್ ಕೊಟ್ಟಿದ್ದಲ್ಲ | ಶರಣ್ ಪಂಪ್ ವೆಲ್