ಕೇರಳದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆ: ಕೋಳಿ, ಬಾತುಕೋಳಿ, ಮೊಟ್ಟೆಗಳನ್ನು ನಾಶಪಡಿಸಲು ಆದೇಶ - Mahanayaka
10:59 PM Friday 20 - September 2024

ಕೇರಳದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆ: ಕೋಳಿ, ಬಾತುಕೋಳಿ, ಮೊಟ್ಟೆಗಳನ್ನು ನಾಶಪಡಿಸಲು ಆದೇಶ

bird flu
11/12/2021

ಆಲಪ್ಪುಳ: ಕೇರಳದ ಆಲಪ್ಪುಳದಲ್ಲಿ  ಮತ್ತೆ ಹಕ್ಕಿ ಜ್ವರ ಪತ್ತೆಯಾಗಿದ್ದು, ಪರಿಣಾಮವಾಗಿ  ಕೋಳಿ ಹಾಗೂ ಬಾತುಕೋಳಿಗಳನ್ನು ನಾಶಪಡಿಸಲು ತಂಡ ರಚಿಸಲಾಗಿದೆ. ರೈತರೊಬ್ಬರು ಸಾಕಿದ ಸಾವಿರಾರು ಬಾತುಕೋಳಿಗಳು ಸಾವನ್ನಪ್ಪಿದ ಬಳಿಕ  ಹಕ್ಕಿ ಜ್ವರ ಪ್ರಕರಣ ಬೆಳಕಿಗೆ ಬಂದಿದೆ.

ಬಾತುಕೋಳಿಗಳು ಸಾವಿರಾರು ಸಂಖ್ಯೆಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಭೂಪಾಲ್‌ ನ ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್‌ ಗೆ ಮಾದರಿಗಳನ್ನು ಕಳುಹಿಸಿದಾಗ ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ. ಹೀಗಾಗಿ ಕೇರಳ ಪಶುಸಂಗೋಪನೆ ಇಲಾಖೆ ತಕ್ಷಣದಲ್ಲಿ ಕ್ರಮಕೈಗೊಂಡಿದ್ದು, ಬಾತುಕೋಳಿ, ಕೋಳಿ ಹಾಗೂ ಮೊಟ್ಟೆಗಳನ್ನು ನಾಶಪಡಿಸಲು ಆದೇಶ ನೀಡಿದೆ.

ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು, ಗೊಬ್ಬರ ಮತ್ತು ಇತರ ಕೋಳಿಗಳ ಸಾಗಾಟವನ್ನು ನಿರ್ಬಂಧಿಸಲಾಗಿದೆ. ಕೇರಳದಲ್ಲಿ ಈ ವರ್ಷದಲ್ಲಿ ಎರಡನೇ ಬಾರಿಗೆ ಹಕ್ಕಿ ಜ್ವರ ದೃಢಪಟ್ಟಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪೂಜೆಯ ನೆಪದಲ್ಲಿ ಅನಾರೋಗ್ಯ ಪೀಡಿತ ಮಹಿಳೆಯ ತಲೆಗೆ ಹೊಡೆದ ಪೂಜಾರಿ: ಮಹಿಳೆಯ ದಾರುಣ ಸಾವು

1 ಲೀಟರ್ ಕತ್ತೆಯ ಹಾಲಿಗೆ 10 ಸಾವಿರ ರೂಪಾಯಿ! | ಒಂದು ಚಮಚ ಕತ್ತೆಯ ಹಾಲಿಗೆ 100 ರೂಪಾಯಿ!

ವಿಶ್ವ ಮಾನವ ಹಕ್ಕುಗಳ ದಿನಾಚರಣೆ | ಸಂತ್ರಸ್ತರ ಪಾಲಿನ ಆಶಾಕಿರಣ ‘ಸಿಕ್ರಂ’: ಡಾ.ದೇವರಾಜು.ಎಸ್.ಎಸ್. 

ವಾಹನ ಇನ್ಸೂರೆನ್ಸ್ ನೆಪದಲ್ಲಿ ಕರೆದು ಶ್ರೀರಾಮಸೇನೆಯ ಕಾರ್ಯಕರ್ತನಿಗೆ ಹಲ್ಲೆ

ಶಿಕ್ಷಕರ ಮೇಲೆ ವಿದ್ಯಾರ್ಥಿಗಳಿಂದ ಪುಂಡಾಟಿಕೆ: ವಿಡಿಯೋ ವೈರಲ್ ಆದ ಬಳಿಕ ನಡೆದದ್ದೇನು?

ಇತ್ತೀಚಿನ ಸುದ್ದಿ