ಮದ್ಯದ ಅಮಲಿನಲ್ಲಿ ಕೆರೆಗೆ ಬಿದ್ದು ಇಬ್ಬರು ಸಾವು
ಚಾಮರಾಜನಗರ: ಮದ್ಯದ ಅಮಲಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಕೆರೆಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಕೆರೆಯಲ್ಲಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ ಕಾರ್ತಿಕ್(30) ಹಾಗೂ ವಿನೋದ್(24) ಮೃತರು. ಈ ಇಬ್ಬರು ವ್ಯಕ್ತಿಗಳು ಕೂಲಿ ಕಾರ್ಮಿಕರಾಗಿದ್ದು ಭಾನುವಾರ ಆದ್ದರಿಂದ ಮದ್ಯಪಾನ ಮಾಡಿ ಕೆರೆ ಬಳಿ ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.
ಇಬ್ಬರ ಮೃತದೇಹಗಳನ್ನು ಅಗ್ನಿಶಾಮಕ ಸಿಬ್ಬಂದಿ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ತೆರಕಣಾಂಬಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw