ಮದ್ಯ ಸೇವಿಸಿ ಬರುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು
ಬೆಳ್ತಂಗಡಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿ ಇಲ್ಲಿನ ನಿವಾಸಿ ಸುಂದರ (40) ಎಂಬವರಾಗಿದ್ದಾರೆ. ಇವರು ವಿಪರೀತ ಮದ್ಯದ ಚಟ ಹೊಂದಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಇವರಿಗಾಗಿ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿಗಳು ಸಿಕ್ಕಿರಲಿಲ್ಲ. ಇದೀಗ ಇವರ ಮೃತದೇಹ ಧರ್ಮಸ್ಥಳಗ್ರಾಮದ ಕನ್ಯಾಡಿಯ ಮತ್ತಿಲ ಎಂಬಲ್ಲಿನ ನಿವಾಸಿ ಅಚ್ಚುತರಾವ್ ಎಂಬವರ ಅಡಿಕೆ ತೋಟದಲ್ಲಿನ ತೆರೆದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮದ್ಯ ಸೇವಿಸಿ ಬರುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿರಬಹುದು ಎಂದು ಅನುಮಾನಿಸಲಾಗಿದ್ದು ಮೃತರ ತಾಯಿ ಸೀತು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka