ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರ ದಾರುಣ ಸಾವು! - Mahanayaka
10:28 AM Tuesday 4 - February 2025

ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರ ದಾರುಣ ಸಾವು!

jagaluru
14/11/2021

ಜಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ  ಮೂವರು ಬಾಲಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದ್ದು, ತಡ ರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಕೆರೆಯಿಂದ ಮೇಲೆತ್ತಲಾಗಿದೆ.

ತಾಲೂಕಿನ ಸಂತೆಮುದ್ದಾಪುರ ಮೂಲದವರಾದ ಪಟ್ಟಣದ ನಿವಾಸಿ ಶೇಖಾವತ್ ಅವರ ಪುತ್ರರಾದ ಆಶಿಕ್ (10), ಅಫ್ರಾನ್‌ (8) ಹಾಗೂ ಅಬ್ದುಲ್ ಅವರ ಪುತ್ರ ಸೈಯದ್ ಫೈಜಾನ್ (9) ಮೃತ ಬಾಲಕರು ಎಂದು ಗುರುತಿಸಲಾಗಿದೆ.

ಆಟವಾಡಲೆಂದು ಹೋಗಿದ್ದ ಬಾಲಕರು ರಾತ್ರಿಯಾದರೂ ವಾಪಸ್ ಆಗದಿದ್ದಾಗ ಅನುಮಾನಗೊಂಡ ಪೋಷಕರು ಹುಟುಕಾಟ ನಡೆಸಿದ್ದು, ಈ ವೇಳೆ ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ರಚಿತಾ ರಾಮ್  “ಫಸ್ಟ್ ನೈಟ್” ಹೇಳಿಕೆಗೆ ಆಕ್ಷೇಪ: ಕ್ಷಮೆಯಾಚನೆಗೆ ಒತ್ತಾಯ

ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ಮಾತೃ ವಿಯೋಗ

ಪುನೀತ್ ಗೆ ಅವಮಾನ ಆರೋಪ: “ಅದು ಶಾಂಪೇನ್ ಬಾಟಲಿ ಆಗಿರಲಿಲ್ಲ” | ರಕ್ಷಿತಾ ಪ್ರೇಮ್ ಸ್ಪಷ್ಟನೆ

ಪುನೀತ್ ಎಲ್ಲ ಚಿತ್ರಗಳಲ್ಲಿಯೂ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದ್ದಾರೆ | ರಮೇಶ್ ಜಾರಕಿಹೊಳಿ ಭಾವುಕ

ಗೋವು, ಸೆಗಣಿ, ಗೋಮೂತ್ರ ಆರ್ಥಿಕತೆಯನ್ನು ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ

ನಿರಂತರ ಮಳೆಗೆ ಕುಸಿದು ಬಿದ್ದ ಗೋಡೆ: ಯುವ ದಂಪತಿಯ ದಾರುಣ ಸಾವು

ಇತ್ತೀಚಿನ ಸುದ್ದಿ