ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರಿನಲ್ಲಿ ಮುಳುಗಿ ದಾರುಣ ಸಾವು!
ಬೀದರ್: ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರಿನಲ್ಲಿ ಮುಳುಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಹುಮನಾಬಾದ್ ತಾಲೂಕಿನ ಘೋಡವಾಡಿಯಲ್ಲಿ ಭಾನುವಾರ ನಡೆದಿದ್ದು, ಹೈದರಾಬಾದ್ ಮೂಲದ ಪ್ರವಾಸಿಗರು ಮೃತಪಟ್ಟವರು ಎಂದು ತಿಳಿದು ಬಂದಿದೆ.
ಇಸ್ಮಾಯಿಲ್ ಖಾದ್ರಿ ದರ್ಗಾಕ್ಕೆ ಪ್ರವಾಸ ಬಂದಿದ್ದ ಹೈದರಾಬಾದ್ ನ ಬೊರಾಬಂಡಾ ನಿವಾಸಿಗಳಾದ 17 ವರ್ಷ ವಯಸ್ಸಿನ ಸೈಯದ್ ಅಕ್ಬರ್ ಉಸ್ಮಾನ್, 19 ವರ್ಷ ವಯಸ್ಸಿನ ಮಹಮ್ಮದ್ ಖಾನ್, 15 ವರ್ಷ ವಯಸ್ಸಿನ ಸೈಯದ್ ಜುನೈದ್ ಹಾಗೂ 18 ವರ್ಷ ವಯಸ್ಸಿನ ಮಹಮ್ಮದ್ ಫಾದಖಾನ್ ಸಲೀಮ್ ಮೃತಪಟ್ಟವರಾಗಿದ್ದಾರೆ ಎಂದು ತಿಳಿದು ಬಂದಿದೆ.
ನೀರಲ್ಲಿ ಮುಳುಗಿರುವವರ ನಾಲ್ವರ ಪೈಕಿ ಸೈಯದ್ ಅಕ್ಬರ್ ಎಂಬವರ ಮೃತದೇಹ ಪತ್ತೆಯಾಗಿದೆ. ಉಳಿದವರ ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದು, ಘಟನಾ ಸ್ಥಳಕ್ಕೆ ಹುಮನಾಬಾದ್ ಪೊಲೀಸ್ ಠಾಣೆ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಅಂಬೇಡ್ಕರ್ ಗಿಂತಲೂ ದೊಡ್ಡವರ ಇವರೆಲ್ಲ? | ಬಿಜೆಪಿಯ ಮತಾಂತರ ಹೈಡ್ರಾಮದ ವಿರುದ್ಧ ರಮೇಶ್ ಕುಮಾರ್ ಕಿಡಿ
ಬಿಜೆಪಿ ಅಭ್ಯರ್ಥಿ ವಿರುದ್ಧ ಭರ್ಜರಿ ಜಯಗಳಿಸಿದ ಮಮತಾ ಬ್ಯಾನರ್ಜಿ!
ಬಟ್ಟೆ ಒಣಗಲು ಹಾಕುತ್ತಿರುವ ವೇಳೆ ವಿದ್ಯುತ್ ಶಾಕ್: ಅಜ್ಜಿ ಹಾಗೂ ಮೊಮ್ಮಗ ಸ್ಥಳದಲ್ಲಿಯೇ ಸಾವು!
ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಒಂದು ವರ್ಷದ ಬಳಿಕ ಆರೋಪಿ ಅರೆಸ್ಟ್
ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ಹಿಂದೂಗಳಿಗೆ ಅಮಿಷವೊಡ್ಡಿ ಮತಾಂತರ ನಡೆಸುತ್ತಿದ್ದಾರೆ | ಕೆ.ಎಸ್.ಈಶ್ವರಪ್ಪ ಆರೋಪ
ಅಂಜನಾದ್ರಿ ಬೆಟ್ಟದಿಂದ ಅಂಗಡಿ ತೆರವು ಮಾಡಲು ಅನ್ಯ ಧರ್ಮೀಯರಿಗೆ ಬೆದರಿಕೆ: ಅತುಲ್ ಕುಮಾರ್ ವಿರುದ್ಧ ಎಫ್ ಐಆರ್