ಕಾಲೇಜಿನ ಧ್ವಜಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿದ ವಿದ್ಯಾರ್ಥಿಗಳು!
ಶಿವಮೊಗ್ಗ: ಬೀದಿ ರಾಜಕೀಯ ಕಾಲೇಜು ಮೆಟ್ಟಿಲು ಹತ್ತಿದ ಬಳಿಕ ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ತ್ರಿವರ್ಣ ಧ್ವಜ ಹಾರಿಸುವ ಧ್ವಜಸ್ತಂಭದಲ್ಲಿಕೇಸರಿ ಬಾವುಟ ಹಾರಿಸಿದ ವಿಲಕ್ಷಣ ಘಟನೆ ನಡೆದಿದೆ.
ವಿದ್ಯಾರ್ಥಿನಿಯರಿಗೆ ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿ, ಕೇಸರಿ ಶಾಲು ಧರಿಸಿ ಬಂದ ಕೆಲವು ವಿದ್ಯಾರ್ಥಿಗಳು ಕಾಲೇಜಿನ ಧ್ವಜಸ್ತಂಭ ಏರಿ ಕೇಸರಿ ಧ್ವಜ ಹಾರಿಸಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಗರದ ಬಾಪೂಜಿನಗರದಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಹೊರ ಭಾಗದಲ್ಲಿ ವಿದ್ಯಾರ್ಥಿಗಳ ನಡುವೆ ಪರಸ್ಪರ ಕಲ್ಲುತೂರಾಟ ನಡೆದಿದೆ ಎನ್ನಲಾಗಿದ್ದು, ವಿದ್ಯಾರ್ಥಿಗಳ ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದೆ ಎನ್ನಲಾಗಿದೆ.
ಇನ್ನೂ ಪರಿಸ್ಥಿತಿ ಕೈ ಮೀರುವುದನ್ನು ಅರಿತ ಪೊಲೀಸರು ಲಾಠಿ ಬೀಸಿದ್ದು, ಗುಂಪುಗಳನ್ನು ಚದುರಿಸಿದ್ದಾರೆ. ಎಸ್.ಪಿ.ಲಕ್ಷ್ಮೀಪ್ರಸಾದ್ ಅವರು ಖುದ್ದಾಗಿ ಲಾಠಿ ಹಿಡಿದು ಕಾರ್ಯಾಚರಣೆಗೆ ಇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶಾಲಾ ಬಾಲಕಿಗೆ ಆನ್‍ಲೈನ್ ನಲ್ಲಿ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
ಬಿಎಸ್ ಪಿ ವರಿಷ್ಠೆ ಮಾಯಾವತಿಯಿಂದ ಪಂಜಾಬ್ ನಲ್ಲಿ ಚುನಾವಣಾ ರ‍್ಯಾಲಿ
ಪೈಪ್ ಲೈನ್ ಕಾಮಗಾರಿಗೆಂದು ಅಗೆದಿದ್ದ ಗುಂಡಿಯೊಳಗೆ ಬಿದ್ದು ಬಾಲಕಿ ಸಾವು