ಕೇಸರಿ ಧ್ವಜ ಹಾರಿಸುತ್ತೇನೆಂದು ಈಶ್ವರಪ್ಪ ಹೇಳಿಲ್ಲ | ಕುಮಾರಸ್ವಾಮಿ - Mahanayaka
5:59 AM Thursday 12 - December 2024

ಕೇಸರಿ ಧ್ವಜ ಹಾರಿಸುತ್ತೇನೆಂದು ಈಶ್ವರಪ್ಪ ಹೇಳಿಲ್ಲ | ಕುಮಾರಸ್ವಾಮಿ

kumaraswamy
18/02/2022

ಬೆಂಗಳೂರು: ನಾನೇ ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇನೆಂದು ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿಲ್ಲ. ಕಾಂಗ್ರೆಸ್‌ ತನ್ನ ಪ್ರತಿಷ್ಠೆಗಾಗಿ ಕಲಾಪ ಹಾಳು ಮಾಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂಬುದು ಬಿಜೆಪಿ, ಆರ್‌ಎಸ್‌ಎಸ್‌ ಮತ್ತು ಅದರ ಸಹ ಸಂಘಟನೆಗಳ ಕಾರ್ಯಸೂಚಿ. ಆ ಕಾರಣದಿಂದ ಮುಂದೊಂದು ದಿನ ಕೆಂಪುಕೋಟೆಯಲ್ಲಿ ಯಾರಾದರೂ ಕೇಸರಿ ಧ್ವಜ ಹಾರಿಸಬಹುದು ಎಂದು ಈಶ್ವರಪ್ಪ ಹೇಳಿದ್ದರು ಎಂದು ಅವರು ಹೇಳಿದರು.

‘ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಹಾಗೂ ಕೇಸರಿ ವಸ್ತ್ರಕ್ಕೆ ಪೂಜ್ಯ ಸ್ಥಾನವಿದೆ. ಧಾರ್ಮಿಕ ಕ್ಷೇತ್ರದಲ್ಲಿರುವವರು ಕೇಸರಿ ವಸ್ತ್ರಗಳನ್ನು ಧರಿಸುತ್ತಾರೆ. ಬಿಜೆಪಿ, ಆರ್‌ಎಸ್ ಎಸ್ ಮತ್ತದರ ಸಹ ಸಂಘಟನೆಗಳು ಕೇಸರಿ ಬಾವುಟವನ್ನು ಇಟ್ಟುಕೊಂಡೇ ಹೋರಾಟ ಮಾಡುತ್ತಿವೆ. ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರ. ಅದರ ಘನತೆಯನ್ನು ಯಾರೂ ಹಾಳು ಮಾಡಬಾರದು ಎಂದರು.

ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ನಡೆಯಬೇಕಿತ್ತು. ಸಚಿವರೊಬ್ಬರ ರಾಜೀನಾಮೆ ಪಡೆಯಬೇಕು ಎಂಬುದನ್ನೇ ಪ್ರತಿಷ್ಠೆ ಮಾಡಿಕೊಂಡು ಜನರ ನಿರೀಕ್ಷೆಗಳನ್ನು ಕಡೆಗಣಿಸಲಾಗುತ್ತಿದೆ. ಹತ್ತು ನಿಮಿಷ ಕಲಾಪ ನಡೆಸಿ, ಮುಂದೂಡುವುದು ಸರಿಯಲ್ಲ. ಅಧಿವೇಶನಕ್ಕೆ ಪ್ರತಿದಿನ ರೂ.1.5ರಿಂದ ರೂ. 2 ಕೋಟಿ ವೆಚ್ಚವಾಗುತ್ತಿದೆ. ಸರಿಯಾಗಿ ಕಲಾಪ ನಡೆಸಲಾಗದಿದ್ದರೆ ಅನಿರ್ದಿಷ್ಟಾವಧಿಗೆ ಮುಂದೂಡಬೇಕು ಎಂದು ಆಗ್ರಹಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಜಾಬ್ , ಜನಿವಾರ, ಕುಂಕುಮ, ಲಿಂಗ, ಕ್ರಾಸ್ ಶಾಲೆಯಿಂದ ಹೊರಗಿಡಿ | ನಟ ಚೇತನ್ ಅಹಿಂಸಾ ಒತ್ತಾಯ

ದಲಿತರಿಗೆ ಜಮೀನು ಮಂಜೂರಾಗುವುದನ್ನು ಸಹಿಸದೇ  ಮಾರಣಾಂತಿಕ ಹಲ್ಲೆ ನಡೆಸಿದ ಮೇಲ್ವರ್ಗದ ಹಿಂದೂಗಳು!

ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪುನೀತ್, ಸಂಚಾರಿ ವಿಜಯ್ ಅವರಿಗೆ ಗೌರವ

ಮುಸ್ಲಿಮ್ ವಿದ್ಯಾರ್ಥಿನಿಗೆ ಬೆಂಗಾವಲಾಗಿ ನಿಂತ ನಾಲ್ವರು ಹಿಂದೂ ವಿದ್ಯಾರ್ಥಿನಿಯರು!

30 ಕೋಟಿ ರೂ. ವಂಚನೆ: ಪಂಚಮುಖಿ ಚಿಟ್ ಫಂಡ್ ಡೈರೆಕ್ಟರ್ ಬಂಧನ

 

ಇತ್ತೀಚಿನ ಸುದ್ದಿ