ಕೇಸರಿ ವಸ್ತ್ರ ಧರಿಸಿ ಗುಂಡಿ ಬಿದ್ದ ರಸ್ತೆಯಲ್ಲಿ ಹೊರಲಾಡಿ ಪ್ರತಿಭಟನೆ!
ತೀವ್ರವಾಗಿ ಹದಗೆಟ್ಟಿರುವ ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮಂಗಳವಾರ ಗುಂಡಿ ಬಿದ್ದ ರಸ್ತೆಯಲ್ಲೇ ಉರುಳು ಸೇವೆ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಕೇಸರಿ ನಿಲುವಂಗಿ ಧರಿಸಿದ್ದ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ತೆಂಗಿನಕಾಯಿ ಒಡೆದು ಬಳಿಕವೂ ಏಕಾಂಗಿಯಾಗಿ ಕೆಸರುಮಯವಾದ ರಸ್ತೆಯಲ್ಲಿ ಸುಮಾರು ನೂರೈವತ್ತು ಮೀಟರ್ ಉರುಳು ಸೇವೆ ಮಾಡಿದರು.
ಹಲವು ಸಮಯಗಳಿಂದ ಈ ರಸ್ತೆ ದುರಸ್ತಿ ಕಾಣದೆ ಬಾಕಿ ಉಳಿದಿದ್ದು ಇದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು ವಾಹನ ಸವಾರರು ಇಲ್ಲಿ ಸಂಚರಿಸಲು ಸಾಕಷ್ಟು ತೊಂದರೆ ಅನುಭವಿಸಬೇಕಾಗಿತ್ತು. ಅಲ್ಲದೆ ಈ ಪ್ರದೇಶ ಅಪಘಾತ ವಲಯವಾಗಿ ಮಾರ್ಪಟ್ಟಿತ್ತು ಈ ಬಗ್ಗೆ ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಅದಕ್ಕಾಗಿ ಅವರ ಗಮನ ಸೆಳೆಯುವುದಕ್ಕಾಗಿ ಈ ವಿನೂತನ ಪ್ರತಿಭಟನೆಯನ್ನು ನಡೆಸಲಾಗಿದೆ ಎಂದು ನಿತ್ಯಾನಂದ ವಳಕಾಡು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka