ಹಿಜಾಬ್ ತೀರ್ಪು: ಬಿಜೆಪಿ ಮುಖಂಡರೊಂದಿಗೆ ಕೇಸರಿಬಾತ್ ಸವಿದು ಸಂಭ್ರಮಿಸಿದ ಸಚಿವ ಈಶ್ವರಪ್ಪ
ಶಿವಮೊಗ್ಗ: ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿದಾದಕ್ಕೆ ಹೈ ಕೋರ್ಟ್ ಬ್ರೇಕ್ ಹಾಕಿದ್ದು, ಹೈಕೋರ್ಟ್ ತ್ರಿಸದಸ್ಯ ಪೀಠ ಹಿಜಾಬ್ ಧರಿಸಲು ಅವಕಾಶ ಕೋರಿದ್ದ ಅರ್ಜಿಗಳನ್ನು ವಜಾ ಮಾಡಿದೆ.
ಹೈಕೋರ್ಟ್ನಿಂದ ಮಹತ್ವದ ತೀರ್ಪು ಹೊರ ಬಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಿಹಿ ತಿಂದು ಸಂಭ್ರಮಿಸಿದ್ದಾರೆ.
ಅಲ್ಲದೆ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಶಿವಮೊಗ್ಗದ ಖಾಸಗಿ ಹೊಟೇಲ್ ತಿಂಡಿ ತಿನ್ನಲು ಹೋಗಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರು ಸಿಹಿ ನೀಡಿ ಸಂಭ್ರಮಿಸಿದ್ದಾರೆ.
ಹೈಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಯಾರೂ ಕೂಡ ಸಂಭ್ರಮಾಚರಣೆ, ಪ್ರತಿಭಟನೆ, ಮೆರವಣಿಗೆ ಮಾಡುವಂತಿಲ್ಲ ಎಂದು ಈ ಹಿಂದೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತಾಯಿ ಸಾವನ್ನಪ್ಪಿದ್ದು ಗೊತ್ತಿಲ್ಲದೇ 4 ದಿನ ಅಮ್ಮನ ಮಡಿಲಲ್ಲೇ ಮಲಗಿದ್ದ ಮಗ
ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಿಮಿಷ ಪ್ರಿಯಗೆ ರಾಯಭಾರ ಕಚೇರಿಯ ಸಹಾಯದ ಭರವಸೆ
ಬರೀ ಟ್ವೀಟ್ ಮಾಡಿದರೆ ಪಕ್ಷ ಉಳಿಯಲ್ಲ: ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಕಿಡಿ
ಹಿಜಾಬ್ ವಿಚಾರ: ಹೈಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಬೇಕು; ಸಿಎಂ ಬಸವರಾಜ ಬೊಮ್ಮಾಯಿ