ಸೋಲಿನ ಸುಳಿವು ದೊರೆತಿರುವ ಹತಾಶೆಯಲ್ಲಿ ಡಿಕೆಶಿ, ಡಿ.ಕೆ.ಸುರೇಶ್ ಅವರಿಂದ ಗೂಂಡಾಗಿರಿ: ಆರ್.ಅಶೋಕ್ ವಾಗ್ದಾಳಿ - Mahanayaka
11:31 AM Wednesday 12 - March 2025

ಸೋಲಿನ ಸುಳಿವು ದೊರೆತಿರುವ ಹತಾಶೆಯಲ್ಲಿ ಡಿಕೆಶಿ, ಡಿ.ಕೆ.ಸುರೇಶ್ ಅವರಿಂದ ಗೂಂಡಾಗಿರಿ: ಆರ್.ಅಶೋಕ್ ವಾಗ್ದಾಳಿ

r ashoka
11/04/2024

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸೋಲಿನ ಸುಳಿವು ದೊರೆತಿರುವ ಹತಾಶೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ X ನಲ್ಲಿ ಪ್ರತಿಕ್ರಿಯಿಸಿರುವ ಅವರು, ಡಿಕೆ ಸಹೋದರರು ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಟೀಕಿಸಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರೆಂಟಿ ಆಗುತ್ತಿದ್ದಂತೆ, ಶಾಶ್ವತವಾಗಿ CM-in-waiting ಆಗಿ ಉಳಿಯಬೇಕಾಗುತ್ತದಲ್ಲಾ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ. ಬಿಜೆಪಿ ಕಾರ್ಯಕರ್ತ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಸಿಎಂ ಸಿದ್ದರಾಮಯ್ಯನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ ಎಂದು ಅಶೋಕ್ ಪ್ರಶ್ನಿಸಿದ್ದಾರೆ.


Provided by

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡುವ ವಾತಾವರಣ ಕೆಡಿಸಿ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಈ ದುಷ್ಕೃತ್ಯಕ್ಕೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕು. ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮಕೈಗೊಂಡು ನಿಷ್ಪಕ್ಷಪಾತವಾಗಿ ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ, ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿhttps://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ