ಬೆಂಗಳೂರು: ಕೆಜಿಗಟ್ಟಲೆ ಸ್ಫೋಟಕ ಪತ್ತೆ - Mahanayaka

ಬೆಂಗಳೂರು: ಕೆಜಿಗಟ್ಟಲೆ ಸ್ಫೋಟಕ ಪತ್ತೆ

banglore 1
30/07/2023

ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಹೆಸರಘಟ್ಟದ ಕಲ್ಲುಗುಡ್ಡದಹಳ್ಳಿ ಹಾಗೂ ದಾಸೇನಹಳ್ಳಿ ಬಳಿಯ ಎರಡು ಮನೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿ, ಎರಡೂ ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಸಾಮಗ್ರಿ ಪತ್ತೆಯಾಗಿದೆ. ಎರಡೂವರೆ ಕೆಜಿ ಸಲ್ಫರ್ ಪೌಡರ್, 250 ಗ್ರಾಂ ಎಕ್ಸ್‌ಪ್ಲೋಸಿವ್‌ ಜೆಲ್, 45 ಕೆಜಿ ಪೊಟಾಶಿಯಂ ನೈಟ್ರೇಟ್ ವೈಟ್ ಪೌಢರ್ ಹಾಗೂ ಸ್ಫೋಟಕ ಮದ್ದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


Provided by

ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿದ್ದ ಶಂಕರ್ ಹಾಗೂ ಕುಮಾರ್ ಎಂಬಿಬ್ಬರನ್ನು ಸೋಲದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ ದಾಸೇನಹಳ್ಳಿಯ ರಾಘವೇಂದ್ರ ಲೇಔಟ್‌ನ ಮನೆ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಶ್ರೀನಿವಾಸ್ ಎಂಬಾತನ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲೂ ಕೆಜಿಗಟ್ಟಲೆ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ.

ಅನುಮತಿ ಇಲ್ಲದೆ ಮನೆಯಲ್ಲಿ ಆಡಗಿಸಿದ್ದ 2ಕಜಿಯಷ್ಟು ಸ್ಫೋಟಕ ವಶಪಡಿಸಿಕೊಂಡಿದ್ದಾರೆ.
ಎರಡೂ ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಸಾಮಗ್ರಿ ಪತ್ತೆಯಾಗಿದೆ. ಎರಡೂವರೆ ಕೆಜಿ ಸಲ್ಫರ್ ಪೌಡರ್, 250 ಗ್ರಾಂ ಎಕ್ಸ್‌ಪ್ಲೋಸಿವ್‌ ಜೆಲ್, 45 ಕೆಜಿ ಪೊಟಾಶಿಯಂ ನೈಟ್ರೇಟ್ ವೈಟ್ ಪೌಢರ್ ಹಾಗೂ ಸ್ಫೋಟಕ ಮದ್ದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.1.860 ಕೆಜಿ ತೂಕದ ಎಕ್ಸ್‌ಪ್ಲೋಸಿವ್‌ ಜೆಲ್, 1.950 ಗ್ರಾಂ ತೂಕದ ಕಾರ್ಕೋಲ ಫೌಡರ್, 7.850 ಗ್ರಾಂ ಸಲ್ಫರ್ ಫೌಡರ್, 13 ಕೆಜಿ ಪೊಟಾಶಿಯಂ ನೈಟ್ರೇಟ್ ಪತ್ತೆಯಾಗಿದೆ. ಪೊಲೀ0ಸರ ವಿಚಾರಣೆ ವೇಳೆ ಕಲ್ಲು ಕ್ವಾರಿಗಾಗಿ ಸಂಗ್ರಹ ಮಾಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ. ಅಕ್ರಮವಾಗಿ ಸ್ಫೋಟಕ ಸಂಗ್ರಹ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ