ಖರ್ಗೆಗೆ ಜೀವ ಬೆದರಿಕೆ: ಆರೋಪಿಗಳ ಬಂಧನಕ್ಕೆ ಒತ್ತಾಯ
13/02/2021
ವಾಡಿ: ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಹಮೂದ್ ಸಾಹೇಬ್ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿರುವುದಕ್ಕೆ ಬಿಜೆಪಿ, ಆರೆಸ್ಸೆಸ್ ಬಜರಂಗದಳದಂತಹ ಸಂಘಟನೆಗಳು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ತಪ್ಪಿತಸ್ಥರು ಯಾರು ಎನ್ನುವುದನ್ನು ತಕ್ಷಣವೇ ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ, ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.
‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದೆ ಅಲ್ಲದೇ ಬಂಡವಾಳಶಾಹಿಗಳನ್ನು ಪ್ರೋತ್ಸಾಹಿ ಸುತ್ತಿದೆ. ಕೇಂದ್ರ ಸರ್ಕಾರದ ದೋರಣೆ ವಿರುದ್ಧವೂ ಪ್ರತಿಭಟನೆ ನಡೆಸುವುದಾಗಿ ಅವರು ತಿಳಿಸಿದರು.