11:12 AM Wednesday 12 - March 2025

ಶೇ.30ರಷ್ಟು ಶಾಲಾ ಶುಲ್ಕ ಕಡಿಮೆ ವಿರೋಧಿಸಿ ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆ!

10/02/2021

ಬೆಂಗಳೂರು:  ಕೊವಿಡ್ ಹಿನ್ನೆಲೆಯಲ್ಲಿ ಪೋಷಕರು ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ಶೇ.30ರಷ್ಟು ಶಾಲಾ ಶುಲ್ಕ ಕಡಿಮೆ ಮಾಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆಗೆ ನಿರ್ಧರಿಸಿದೆ.

ಫೆ.23ರಂದು  ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ. ಕ್ಯಾಮ್ಸ್, ಮಿಕ್ಸಾ, ಮಾಸ್, ಕುಸುಮ, ಸಿಬಿಎಸ್‌ ಇ ಹಾಗೂ ಐಸಿಎಸ್‌ ಇ ಶಾಲೆಗಳ ಒಕ್ಕೂಟ ಈ ಪ್ರತಿಭಟನೆಗೆ ನಿರ್ಧರಿಸಿವೆ.

ಇನ್ನೂ ಶಿಕ್ಷಣ ಇಲಾಖೆ ತೆಗೆದುಕೊಂಡ ನಿರ್ಧಾರವನ್ನು ಸ್ವಾಗತಿಸಿದ ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ರುಪ್ಸಾದಲ್ಲಿ 13 ಸಾವಿರಕ್ಕೂ ಹೆಚ್ಚು ಬಜೆಟ್ ಶಾಲೆಗಳಿವೆ. ಶೇ.30ರಷ್ಟು ಶುಲ್ಕ ಕಡಿತದ ಬಗ್ಗೆ ಯಾವುದೇ ತಕರಾರು ಇಲ್ಲ.ಹೀಗಾಗಿ ಫೆಬ್ರವರಿ 23 ರಂದು ಕರೆಕೊಟ್ಟಿರುವ ಹೋರಾಟಕ್ಕೆ ನಮ್ಮ ಬೆಂಬಲವಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

Exit mobile version