ಸಂಬಳ ಸಿಕ್ಕಿಲ್ಲ ಎಂದು ಕಿಡ್ನಿ ಮಾರಾಟಕ್ಕೆ ಮುಂದಾದ ಸಾರಿಗೆ ನೌಕರ!
10/02/2021
ಕೊಪ್ಪಳ: ರಾಜ್ಯ ಸಾರಿಗೆ ನೌಕರರು ವೇತನ ಸಿಗದೇ ಪರದಾಡುತ್ತಿರುವುದರ ನಡುವೆಯೇ ಸಾರಿಗೆ ಸಿಬ್ಬಂದಿಯೊಬ್ಬರು ತಮ್ಮ ಕಿಡ್ನಿಯನ್ನು ಮಾರಾಟ ಮಾಡುವ ನಿರ್ಧಾರಕ್ಕೆ ಬಂದಿದ್ದು, ಆರ್ಥಿಕ ಸಂಕಷ್ಟಕ್ಕೆ ಕೊನೆ ಹಾಡಲು ಈ ನಿರ್ಧಾರಕ್ಕೆ ಬಂದಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯ ಡಿಪೋ ನಿರ್ವಾಹಕ ಹನುಮಂತಪ್ಪ, ಕುಟುಂಬ ನಿರ್ವಹಣೆಗೆ ಹಣವಿಲ್ಲದೇ ಕಿಡ್ನಿ ಮಾರಾಟಕ್ಕೆ ಮುಂದಾಗಿದ್ದಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
ಕಳೆದ ಎರಡು ತಿಂಗಳಿಂದ ಸಂಬಳವಿಲ್ಲದೇ ಪರದಾಡುತ್ತಿದ್ದು, ಮನೆ ಬಾಡಿಗೆ ಕಟ್ಟಲು, ರೇಷನ್ ತರಲೂ ಕೂಡ ಹಣವಿಲ್ಲ. ಹಾಗಾಗಿ ನಾನು ನನ್ನ ಕಿಡ್ನಿ ಮಾರಾಟ ಮಾಡುತ್ತಿದ್ದೇನೆ ಎಂದು ಹೇಳಿ ಮೊಬೈಲ್ ನಂಬರ್ ಸಹಿತವಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ.