ಕರಗ ಮಹೋತ್ಸವದ ಮೆರವಣಿಗೆ ವೇಳೆ ಯುವಕನ ಬರ್ಬರ ಹತ್ಯೆ!

police
25/04/2024

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವದ ಮೆರವಣಿಗೆ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಅನ್ನಮ್ಮ ದೇಗುಲದ ಬಳಿ ನಡೆದಿದೆ.

ಶೇಷಾದ್ರಿಪುರಂನ ವಿವಿ ಗಿರಿ ಕಾಲೋನಿಯ ನಿವಾಸಿ ಡಿ.ಸಾರಧಿ  ಸಾವನ್ನಪ್ಪಿದ ಯುವಕ ಎಂದು ಗುರುತಿಸಲಾಗಿದೆ.  ಅನ್ನಮ್ಮ ದೇಗುಲದ ಮುಂಭಾಗದಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿ ಸಾರಧಿ ಮತ್ತು ಸ್ನೇಹಿತರನ್ನು ಸ್ಪರ್ಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಆರಂಭವಾಗಿತ್ತು. ಈ ವೇಳೆ ದುಷ್ಕರ್ಮಿಗಳು ಸಾರಧಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಗಾಯಾಳು ಸಾರಧಿಯನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾರಧಿ ಮೃತಪಟ್ಟಿದ್ದಾರೆ.

ಏಪ್ರಿಲ್ 23ರ ರಾತ್ರಿ 3.30ರಲ್ಲಿ ಅಣ್ಣಮ್ಮ ದೇಗುಲದ ಮುಂದೆ ಘಟನೆ ನಡೆದಿತ್ತು. ಉಪ್ಪಾರಪೇಟೆ ಪೊಲೀಸ್​​​ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ನಾಲ್ವರು ಅಪ್ರಾಪ್ತ ವಯಸ್ಕರು ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದ್ದು, ಪ್ಲವರ್ ಕಟ್ಟರ್ ಆಯುಧದಿಂದ ಸಾರಧಿಯ ಎದೆಗೆ ಚುಚ್ಚಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version