ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪ: ವಿಡಿಯೋ ನೋಡಿ - Mahanayaka

ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪ: ವಿಡಿಯೋ ನೋಡಿ

king cobra hunting
15/11/2022

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡ(Indian Monitor)ವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು.


Provided by

ಉದ್ಯಮಿ ಶಶಿರಾಜ್ ಶೆಟ್ಟಿಯವರ ಮನೆಯ ಹಿಂಭಾಗದಲ್ಲಿ ದೊಡ್ಡ ಗಾತ್ರದ ಉಡವನ್ನು ಬೃಹತ್ ಗಾತ್ರದ ಕಾಳಿಂಗ ಸರ್ಪ(King cobra)ವೊಂದು ಬೇಟೆಯಾಡುವುದನ್ನು ಗಮನಿಸಿ ಸ್ನೇಕ್ ಅಶೋಕ್ ಕುಮಾರ್ ಲಾಯಿಲ ಅವರಿಗೆ ಮಾಹಿತಿ ನೀಡಿದರು.

ತಕ್ಷಣ ಆಗಮಿಸಿದ ಸ್ನೇಕ್ ಅಶೋಕ್ ಕುಮಾರ್ ಅವರು ಕಾಳಿಂಗ ಸರ್ಪವನ್ನು ಹಿಡಿಯುವ ಸಂದರ್ಭದಲ್ಲಿ ಕಾಳಿಂಗ ಸರ್ಪ ಅವರ ಮೇಲೆರಗಿದ ಘಟನೆಯು ನಡೆಯಿತು. ಆದರೂ ಅತ್ಯಂತ ಸಾಹಸದಿಂದ ಅಂತಿಮವಾಗಿ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ