ನವದೆಹಲಿಯಲ್ಲಿ ಮ್ಯಾಜಿಕ್ ಮಾಡಲಿದೆ ಕೆಎಂಎಫ್ ನ ನಂದಿನಿ ಬ್ರಾಂಡ್ ಉತ್ಪನ್ನಗಳು!
ಬೆಂಗಳೂರು: ಕೆಎಂಎಫ್ ನ ನಂದಿನಿ ಬ್ರಾಂಡ್ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮ್ಯಾಜಿಕ್ ಮಾಡಲಿವೆ. ಕೆಎಂಎಫ್ ಈ ತಿಂಗಳು ಇಡ್ಲಿ ಮತ್ತು ದೋಸೆ ಹಿಟ್ಟು ಮತ್ತು ನವದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆಯನ್ನು ನೀಡಲಿದೆ.
ನವೆಂಬರ್ 21ರಿಂದ ದೆಹಲಿಯಲ್ಲಿ ನಂದಿನಿ ಉತ್ಪನ್ನಗಳು ಜನರಿಗೆ ಲಭ್ಯವಾಗಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ 21ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಂದಿನಿ ಬ್ರಾಂಡ್ ನ ಹಾಲು, ಮೊಸರು ಸೇರಿದಂತೆ ವಿವಿಧ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಹೊರ ರಾಜ್ಯದಲ್ಲಿಯೂ ನಂದಿನಿ ತನ್ನ ಮಾರುಕಟ್ಟೆಯನ್ನು ವಿಸ್ತರಣೆ ಮಾಡಲಿದೆ.
ಕೆಎಂಎಫ್ ನ ವ್ಯವಸ್ಥಾಪಕ ನಿರ್ದೇಶಕ ಎಂ. ಕೆ. ಜಗದೀಶ್ ಈ ಬಗ್ಗೆ ಮಾತನಾಡಿ, ನವದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವೆಂಬರ್ 21ರಂದು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಬೆಂಗಳೂರು ನಗರದಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟಕ್ಕೆ ನವೆಂಬರ್ 26ರಂದು ಚಾಲನೆ ಸಿಗಲಿದೆ ಎಂದು ಅವರು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: