Jobs for 10th Pass : ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಕೆ ಆರಂಭ

Kodagu Zilla Panchayat Jobs : ದ್ವಿತೀಯ ಪಿಯುಸಿ ಪಾಸ್ ಆಗಿ ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ, ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಹ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು 13ನೇ ಫೆಬ್ರವರಿ 2025ರ ಒಳಗಾಗಿ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರಗಳು ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳ ವಿವರವನ್ನು ಇಲ್ಲಿ ನೀಡಿದೆ.
ಹುದ್ದೆಗಳ ವಿವರ :
ಕೊಡಗು ಜಿಲ್ಲಾ ಪಂಚಾಯತ್ ನ ಅಡಿಯಲ್ಲಿ ಬರುವ ವಿವಿಧ 10 ಗ್ರಾಮ ಪಂಚಾಯಿತಿಗಳಲ್ಲಿ, ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಈ ಒಂದು ನೇಮಕಾತಿ ನಡೆಯುತ್ತಿದೆ. ಗ್ರಾಮ ಪಂಚಾಯಿತಿಗೆ ಒಂದರಂತೆ 10 ಗ್ರಾಮ ಪಂಚಾಯಿತಿಗಳಲ್ಲಿ, ಒಟ್ಟು 10 ಹುದ್ದೆಗಳು ಖಾಲಿ ಇವೆ.
ಶೈಕ್ಷಣಿಕ ಅರ್ಹತೆಗಳು : ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಪಾಸ್ ಆಗಿದ್ದು ಅದರ ಜೊತೆಗೆ ಲೈಬ್ರರಿ ಕೋರ್ಸ್ ಪ್ರಮಾಣ ಪತ್ರ ಹೊಂದಿರಬೇಕು.
ವಯೋಮಿತಿ : ವಯೋಮಿತಿ ಅರ್ಹತೆ ನೋಡುವುದಾದರೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷದ ಒಳಗಿರಬೇಕು.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ಮಾಸಿಕ ಸಂಬಳ ಎಷ್ಟು?
ನೇಮಕಾತಿ ಪ್ರಕ್ರಿಯೆಯಲ್ಲಿ ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 18,606ರೂ. ಮಾಸಿಕ ಸಂಬಳ ಕೊಡಲಾಗುವುದು.
ಅರ್ಜಿ ಶುಲ್ಕ ಎಷ್ಟು :
ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು 500ರೂ. ಹಾಗೂ 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದವರು 300ರೂ. SC, ST ಮತ್ತು Cat-I ವರ್ಗದವರು 200ರೂ. ಪಾವತಿಸಬೇಕು. ಅದೇ ರೀತಿ ಎಲ್ಲಾ ವರ್ಗದ ಅಂಗವಿಕಲ ಅಭ್ಯರ್ಥಿಗಳಳು 100ರೂ. ಅರ್ಜಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ – 13ನೇ ಫೆಬ್ರವರಿ 2025
ಅರ್ಜಿ ಸಲ್ಲಿಸುವ ಅಧಿಕೃತ ಜಾಲತಾಣದ ಲಿಂಕ್ – https://kodagu.nic.in
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: