ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಗೆ ಗೇಟ್ ಪಾಸ್! - Mahanayaka
12:28 AM Wednesday 5 - February 2025

ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಗೆ ಗೇಟ್ ಪಾಸ್!

kodihalli chandrashekhar
31/05/2022

ಶಿವಮೊಗ್ಗ: ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್  ಅವರನ್ನು ವಜಾಗೊಳಿಸಲಾಗಿದೆ.  ಅಲ್ಲದೇ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು  ಮರು ಆಯ್ಕೆ ಮಾಡಲಾಗಿದೆ.

ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಇಂದು 18 ಜಿಲ್ಲೆಗಳ ರೈತ ಸಂಘದ ಪದಾಧಿಕಾರಿಗಳು, ರಾಜ್ಯ ಸಮಿತಿ ಪದಾಧಿಕಾರಿಗಳು ಸಭೆ ಸೇರಿ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆ.

ಈ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ನೂತನ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಅವರು, ಇನ್ನುಮುಂದೆ ಕೋಡಿಹಳ್ಳಿ ಚಂದ್ರಶೇಖರ್ ಹೊರಗಿಟ್ಟು ಸಂಘಟನೆ ಬಲಪಡಿಸುತ್ತೇವೆ. ಎಲ್ಲಾ ರೈತ ಸಂಘಗಳು ಒಂದಾಗಿ ಮಾತುಕತೆಗೆ ಬಂದಲ್ಲಿ ನಾನು ಅಧ್ಯಕ್ಷ ಸ್ಥಾನ ತ್ಯಜಿಸುತ್ತೇನೆ ಎಂದಿದ್ದಾರೆ.

1980 ರಲ್ಲಿ ರೈತ ಚಳವಳಿ ಆರಂಭವಾಯ್ತು. 1972 ರಲ್ಲೇ ಶಿವಮೊಗ್ಗದಲ್ಲಿ ರೈತ ಸಂಘ, ಮೂಡಿಗೆರೆಯಲ್ಲಿ ಕಬ್ಬು ಬೆಳೆಗಾರರ ಸಮಾವೇಶವನ್ನು ಪ್ರೊ. ನಂಜುಡಸ್ವಾಮಿ ಮಾಡಿದ್ದರು. ಶಿವಮೊಗ್ಗ ಜಿಲ್ಲೆಗೆ ರೈತ ಸಂಘದ 50 ವರ್ಷ ಚಳವಳಿ ಹಿನ್ನಲೆ ಇದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಠ್ಯಪುಸ್ತಕದ ವಿಚಾರದಲ್ಲಿ ಸತ್ಯದ ವಿಷಯ ಮರೆಮಾಚುವ ಕೆಲಸ ಆಗ್ತಿದೆ: ಸದಾನಂದ ಗೌಡ

ಮೇ 31, ಜೂನ್ 1ರಂದು ಮಂಗಳೂರಿನಲ್ಲಿ  ರಾಜ್ಯಮಟ್ಟದ ಮುಸ್ಲಿಂ ಸಮಾವೇಶ

ದಲಿತ ಮಹಿಳೆಯರು ಪ್ರವೇಶಿಸಿದ ದೇವಸ್ಥಾನಕ್ಕೆ ಬೀಗ: ನಾಪತ್ತೆಯಾದ ಧರ್ಮ ರಕ್ಷಕರು!

ಆ್ಯಂಬುಲೆನ್ಸ್-ಟ್ರಕ್ ನಡುವೆ ಭೀಕರ ಅಪಘಾತ: ರೋಗಿ ಸಹಿತ 7 ಮಂದಿ ಸಾವು

ಪತಿ ಜೊತೆ ಜಗಳ: ತನ್ನ ಆರು ಮಕ್ಕಳನ್ನು ಬಾವಿಗೆಸೆದ ಪಾಪಿ ತಾಯಿ!

ಇತ್ತೀಚಿನ ಸುದ್ದಿ