ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಕೇಸರಿ ಧ್ವಜ ಹಾರಿಸಿದ ಕಿಡಿಗೇಡಿಗಳು

kodlipete
14/08/2022

ಶನಿವಾರಸಂತೆ:  ಕೊಡ್ಲಿಪೇಟೆ ಬಸ್ ನಿಲ್ದಾಣದ ಬಳಿ ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಕೇಸರಿ ಧ್ವಜ ಹಾರಿಸಿರುವುದು ವಿವಾದಕ್ಕೆ ಕಾರಣವಾಗಿದ್ದು, ಕೃತ್ಯ ಎಸಗಿರುವವರ ವಿರುದ್ಧ ತಕ್ಷಣವೇ ಕಾನೂನು ಕ್ರಮಕೈಗೊಳ್ಳಬೇಕು ಎಂಬ ಆಕ್ರೋಶ ಕೇಳಿ ಬಂದಿದೆ.

ಸರ್ಕಾರದ ಆದೇಶ ಉಲ್ಲಂಘಿಸಿ, ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಕೇಸರಿ ಧ್ವಜವನ್ನು ಹಾರಿಸಲಾಗಿದ್ದು, ರಾಷ್ಟ್ರಧ್ವಜಕ್ಕೆ ಅಗೌರವ ಸಲ್ಲಿಸಲಾಗಿದೆ. ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಯಾವುದೇ ಬಾವುಟವನ್ನು ಹಾರಿಸುವಂತಿಲ್ಲ. ಯಾವುದೇ ಧರ್ಮ, ಜಾತಿ, ಸಂಘಟನೆಗಳ ಧ್ವಜಗಳನ್ನು ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಹಾರಿಸುವುದು ರಾಷ್ಟ್ರ ಧ್ವಜಕ್ಕೆ ಮಾಡುವ ಅಪಮಾನವಾಗಿದೆ.

ಈ ಘಟನೆಗೆ ಕರ್ನಾಟಕ ರಕ್ಷಣಾ ವೇದಿಕೆಯ ಹೋಬಳಿ ಘಟಕದ ಕಾರ್ಯದರ್ಶಿ ಡಿ.ಆರ್.ವೇದಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಯಾವ ರಾಷ್ಟ್ರ ಪ್ರೇಮ? ಯಾವ ದೇಶ ಭಕ್ತಿ ಎಂದು ಪ್ರಶ್ನಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೂವಯ್ಯ, ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version