25ನೇ ವಯಸ್ಸಿನಲ್ಲೇ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದ ಗಾಯತ್ರಿ: ಸಾಮಾಜಿಕ ಜಾಲತಾಣಗಳಲ್ಲಿ ಹರಿದು ಬಂದ ಅಭಿನಂದನೆ
ಕೋಲಾರ: ಕರ್ನಾಟಕ ಉಚ್ಚ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನಡೆದ ನೇರ ನೇಮಕಾತಿಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾರಹಳ್ಳಿಯ ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ.
25ನೇ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿರುವ ಗಾಯತ್ರಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳು ಹರಿದು ಬಂದಿದೆ.
ಬಡತನದ ಹಿನ್ನೆಲೆಯ ಕುಟುಂಬದಿಂದ ಬಂದಿದ್ದರೂ ಸಾಧಿಸುವ ಛಲ ಹಾಗೂ ಕಠಿಣ ಪರಿಶ್ರಮದಿಂದ ಗಾಯತ್ರಿ ಅವರು ಈ ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ.
ಬಂಗಾರಪೇಟೆಯ ಕಾರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಲಕಿಯರ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಣ ಪಡೆದುಕೊಂಡಿದ್ದ ಇವರು, ಕೆಜಿಎಫ್ ನ ಕೆಂಗಲ್ ಹನುಮಂತಯ್ಯ ಲಾ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು, ಕರ್ನಾಟಕಕ್ಕೆ ನಾಲ್ಕನೇ ರಾಂಕ್ ಪಡೆದುಕೊಂಡಿದ್ದರು.
ನಾರಾಯಣಸ್ವಾಮಿ ಹಾಗೂ ವೆಂಕಟಲಕ್ಷ್ಮೀ ಅವರ ಏಕೈಕ ಪುತ್ರಿಯಾಗಿರುವ ಗಾಯತ್ರಿ ಅವರ ಸಾಧನೆಗೆ ಗ್ರಾಮಸ್ಥರು, ಕುಟುಂಬಸ್ಥರು ಸೇರಿದಂತೆ ರಾಜ್ಯಾದ್ಯಂತ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ಗಾಯತ್ರಿ ಅವರ ಸಾಧನೆಯ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಯುತ್ತಿದ್ದಂತೆಯೇ ರಾಜ್ಯಾದ್ಯಂತ ಅವರಿಗೆ ಸಾರ್ವಜನಿಕರು ಅಭಿನಂದನೆಗಳನ್ನು ಸಲ್ಲಿಸಿರುವುದು ವಿಶೇಷವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw