ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ | ನಾಲ್ವರು ಸೋಂಕಿತರು ಸಾವು - Mahanayaka

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ | ನಾಲ್ವರು ಸೋಂಕಿತರು ಸಾವು

oxigen
26/04/2021

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಆಕ್ಸಿಜನ್ ಸಮಸ್ಯೆ ಉಂಟಾಗಿದ್ದು ಮಹಿಳೆಯರು ಸೇರಿ ನಾಲ್ವರು ಕೊನೆಯುಸಿರೆಳೆದಿದ್ದಾರೆ.


Provided by

ಐಸಿಯು ವಾರ್ಡ್ ನಲ್ಲಿ ಆಕ್ಸಿಜನ್ ಕೊರತೆ ಕಂಡುಬಂದಿದ್ದು, ರಾತ್ರಿ ಫೋನ್ ಮಾಡಿದರೂ ಸಿಬ್ಬಂದಿ ಕರೆ ಸ್ವೀಕರಿಸಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಸಿಯು ವಾರ್ಡ್ ನಲ್ಲಿ 15 ಮಂದಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಸರಿಯಾಗಿ ಆಕ್ಸಿಜನ್ ಪೂರೈಕೆಯಾಗದೇ ನಾಲ್ವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Provided by

ಇತ್ತೀಚಿನ ಸುದ್ದಿ