ಮಂಗಳೂರು: ಕೊಲೆ ಯತ್ನದ ಆರೋಪಿಗೆ ಗುಂಡೇಟು
ಮಂಗಳೂರು: ಕೊಲೆಯತ್ನ ಸಹಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು ಗುಂಡೇಟು ಹಾಕಿದ ಘಟನೆ ಇಂದು ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟಿಗೊಳಗಾದ ಆರೋಪಿಯಾಗಿದ್ದಾನೆ. ಆಗಸ್ಟ್ 19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪ ಈತನ ಮೇಲಿತ್ತು. ಅದರಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಇಂದು(ಆ.22) ಸ್ಥಳ ಮಜಹರು ಮಾಡಲು ಕರೆದೊಯ್ದ ವೇಳೆ ಆರೋಪಿಯು ಪೊಲೀಸರ ಮೇಲೆರೆಗಿ ತಪ್ಪಿಸಲು ಮುಂದಾದ ಎನ್ನಲಾಗಿದೆ. ಈ ಸಂದರ್ಭ ಪೊಲೀಸರು ಆರೋಪಿಗೆ ಗುಂಡೇಟು ಹಾಕಿ ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka