ಕೋಮು ಪ್ರಚೋದನಕಾರಿ ಭಾಷಣ ಆರೋಪ: ಹಾರಿಕಾ ಮಂಜುನಾಥ ವಿರುದ್ಧ ಎಫ್​ಐಆರ್​ ದಾಖಲು - Mahanayaka

ಕೋಮು ಪ್ರಚೋದನಕಾರಿ ಭಾಷಣ ಆರೋಪ: ಹಾರಿಕಾ ಮಂಜುನಾಥ ವಿರುದ್ಧ ಎಫ್​ಐಆರ್​ ದಾಖಲು

harika-manjunath
27/12/2021

ಮಂಗಳೂರು: ಬೆಳ್ತಂಗಡಿಯಲ್ಲಿ ನಡೆದ ಶೌರ್ಯ ಪಥ ಸಂಚಲನ ಕಾರ್ಯಕ್ರಮದಲ್ಲಿ ಬೆಂಗಳೂರಿನ ಹಾರಿಕಾ ಮಂಜುನಾಥ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಯುವ ವಾಗ್ಮಿ ಬೆಂಗಳೂರಿನ ಹಾರಿಕಾ ಮಂಜುನಾಥ ವಿರುದ್ಧ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿಯೊಬ್ಬರು ದೂರು ನೀಡಿದ್ದಾರೆ.
ವಾರದ ಹಿಂದೆ ಬೆಳ್ತಂಗಡಿಯಲ್ಲಿ ನಡೆದ ಗೀತಾ ಜಯಂತಿ ಅಂಗವಾಗಿ ವಿಶ್ವಹಿಂದೂ ಪರಿಷತ್ ಭಜರಂಗದಳ, ಮಾತೃ ಮಂಡಳಿ, ದುರ್ಗ ವಾಹಿನಿ ಪ್ರಖಂಡ ಇದರ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಕಾರರಾಗಿ ಹಾರಿಕಾ ಮಂಜುನಾಥ ಭಾಗವಹಿಸಿದ್ದರು.

ಈ ವೇಳೆ ಅವರು, ಮಸ್ಲೀಮರು ‌ಮಸೀದಿಯಲ್ಲಿ ಐದು ಹೊತ್ತಿನ ನಮಾಜ್​ಗೆ ಕರೆ ಕೊಡುವ ಅಜಾನ್​ನಲ್ಲಿ ಕಾಫಿರ್ ಮುಸ್ಲೀಮೇತರರನ್ನು ಕೊಲ್ಲಲು ಕರೆ ಕೊಡುತ್ತಿದ್ದಾರೆ ಎಂದು ಭಾಷಣ ಮಾಡಿ ಮುಸ್ಲಿಂ ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆ. ಜೊತೆಗೆ ಹಿಂದೂ ಭಾಂದವರನ್ನು ಮುಸ್ಲಿಂ ಸಮುದಾಯದ ವಿರುದ್ಧ ಉದ್ರೇಕಿಸಲು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಮಿಕ್ರಾನ್ ಭೀತಿ:  ಡಿಸೆಂಬರ್ 28ರಿಂದ 10 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ!

ಸನ್ನಿ ಲಿಯೋನ್ ಮೇಲೆ ಅರ್ಚಕರ ಕೆಂಗಣ್ಣು: ಕ್ಷಮೆ ಕೇಳದಿದ್ದರೆ ಭಾರತದಲ್ಲಿರಲು ಬಿಡಲ್ಲ ಎಂದು ಬೆದರಿಕೆ

ಅಭಿಮಾನಿಗಳಿಗೆ ಕೈಮುಗಿದು ಬೇಡಿಕೊಂಡ ನಿಖಿಲ್ ಕುಮಾರಸ್ವಾಮಿ | ಕಾರಣ ಏನು ಗೊತ್ತಾ?

ಪುತ್ರಿಯ ನಿಶ್ಚಿತಾರ್ಥದ ಫೋಟೋ ಹಂಚಿಕೊಂಡ ಸಚಿವೆ ಸ್ಮೃತಿ ಇರಾನಿ

ಕೇರಳದಲ್ಲಿ ಪೊಲೀಸರ ಮೇಲೆ ವಲಸೆ ಕಾರ್ಮಿಕರ ದಾಳಿ: ಪೊಲೀಸ್ ಜೀಪ್ ಅಗ್ನಿಗಾಹುತಿ

 

ಇತ್ತೀಚಿನ ಸುದ್ದಿ